ಬಿ.ಸಿ.ರೋಡಿನ ಸ್ಮಾರ್ಟ್ ಸಿಟಿ ಸಂಕೀರ್ಣದಲ್ಲಿ ಕಾಂಗ್ರೆಸ್ ಚುನಾವಣಾ ಕಛೇರಿ ಉದ್ಘಾಟನೆ - Karavali Times ಬಿ.ಸಿ.ರೋಡಿನ ಸ್ಮಾರ್ಟ್ ಸಿಟಿ ಸಂಕೀರ್ಣದಲ್ಲಿ ಕಾಂಗ್ರೆಸ್ ಚುನಾವಣಾ ಕಛೇರಿ ಉದ್ಘಾಟನೆ - Karavali Times

728x90

4 April 2024

ಬಿ.ಸಿ.ರೋಡಿನ ಸ್ಮಾರ್ಟ್ ಸಿಟಿ ಸಂಕೀರ್ಣದಲ್ಲಿ ಕಾಂಗ್ರೆಸ್ ಚುನಾವಣಾ ಕಛೇರಿ ಉದ್ಘಾಟನೆ

ಬಂಟ್ವಾಳ, ಎಪ್ರಿಲ್ 04, 2024 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರ ಚುನಾವಣಾ ಪ್ರಚಾರ ಕಚೇರಿ ಬಿ ಸಿ ರೋಡಿನ ಬಾವಾ ಬಿಲ್ಡರ್ಸ್ ಸ್ಮಾರ್ಟ್ ಸಿಟಿ ಸಂಕೀರ್ಣದ 2ನೇ ಮಹಡಿಯಲ್ಲಿ ಗುರುವಾರ ಉದ್ಘಾಟನೆಗೊಂಡಿತು. 

ಕಚೇರಿ ಉದ್ಘಾಟಿಸಿದ ದ ಕ ಲೋಕಸಭಾ ಕ್ಷೇತ್ರದ ಪ್ರಚಾರ ಉಸ್ತುವಾರಿ, ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ಬಿ ರಮಾನಾಥ ರೈ ಮಾತನಾಡಿ, ಬುಧವಾರ ನಮ್ಮ ಅಭ್ಯರ್ಥಿ ಪದ್ಮರಾಜ್ ಅವರು ನಾಮಪತ್ರ ಸಲ್ಲಿಸಿದ್ದು, ಇಂದು ಬಿ ಸಿ ರೋಡಿನಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರಚಾರ ಕಚೇರಿ ಉದ್ಘಾಟನೆಗೊಂಡಿದೆ. ಇದೇ ಕ್ಷಣದಿಂದ ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ ಪ್ರಚಾರ ಕಾರ್ಯ ಬಿರುಸು ಪಡೆದುಕೊಳ್ಳಲಿದೆ. ಇನ್ನು ಕೆಲವು ದಿನ ಪಕ್ಷದಲ್ಲಿ ಚುನಾವಣಾ ಕರ್ತವ್ಯಕ್ಕೆ ನೇಮಕಗೊಂಡ ನಾಯಕರು ಪಕ್ಷದ ಕಾರ್ಯಕರ್ತರನ್ನು ಸೇರಿಸಿಕೊಂಡು ಬಿಡುವಿಲ್ಲದೆ ಅಭ್ಯರ್ಥಿಯ ಪರವಾಗಿ ಪ್ರಚಾರ ಕೈಗೊಂಡು ಗೆಲುವಿಗಾಗಿ ಶ್ರಮಿಸುವಂತೆ ಕರೆ ನೀಡಿದರು. 

ಈ ಸಂದರ್ಭ ಬಂಟ್ವಾಳ ಕ್ಷೇತ್ರದ ಚುನಾವಣಾ ಸಂಯೋಜಕ ಹಾಗೂ ವೀಕ್ಷಕ ಪಿಯೂಸ್ ಎಲ್ ರೋಡ್ರಿಗಸ್, ಬಂಟ್ವಾಳ ಕ್ಷೇತ್ರದ ಪ್ರಚಾರ ಉಸ್ತುವಾರಿ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಪಕ್ಷ ಪ್ರಮುಖರಾದ ಎಂ ಅಶ್ವನಿ ಕುಮಾರ್ ರೈ,  ಬಿ ಎಂ ಅಬ್ಬಾಸ್ ಅಲಿ, ಜನಾರ್ದನ ಚಂಡ್ತಿಮಾರ್, ಮುಹಮ್ಮದ್ ನಂದರಬೆಟ್ಟು, ಲುಕ್ಮಾನ್ ಬಿ ಸಿ ರೋಡು, ಜಯಂತಿ ಪೂಜಾರಿ, ಅನ್ವರ್ ಕರೋಪಾಡಿ, ಪದ್ಮನಾಭ ರೈ, ಸುದರ್ಶನ್ ಜೈನ್, ಅಲ್ತಾಫ್ ಸಂಗಬೆಟ್ಟು, ಸ್ಟೀವನ್ ಡಿಸೋಜ, ಮಧುಸೂಧನ್ ಶೆಣೈ, ಬಿ ಮೋಹನ್, ರಾಜೇಶ್ ರೋಡ್ರಿಗಸ್, ಪ್ರವೀಣ್ ರೋಡ್ರಿಗಸ್ ಮೊದಲಾದವರು ಭಾಗವಹಿಸಿದ್ದರು. 

  • Blogger Comments
  • Facebook Comments

0 comments:

Post a Comment

Item Reviewed: ಬಿ.ಸಿ.ರೋಡಿನ ಸ್ಮಾರ್ಟ್ ಸಿಟಿ ಸಂಕೀರ್ಣದಲ್ಲಿ ಕಾಂಗ್ರೆಸ್ ಚುನಾವಣಾ ಕಛೇರಿ ಉದ್ಘಾಟನೆ Rating: 5 Reviewed By: karavali Times
Scroll to Top