ಬೆಳ್ತಂಗಡಿ, ಎಪ್ರಿಲ್ 28, 2024 (ಕರಾವಳಿ ಟೈಮ್ಸ್) : ಮನೆಯಲ್ಲಿ ಯಾರೂ ಇಲ್ಲದ ವೇಳೆ ನುಗ್ಗಿದ ಕಳ್ಳರು ಚಿನ್ನಾಭರಣ ಹಾಗೂ ನಗದು ಹಣ ಕಳವುಗೈದ ಘಟನೆ ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ರನ್ನಾಡಿ ಎಂಬಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ.
ಇಲ್ಲಿನ ನಿವಾಸಿ ಬಿಜು ಕುರಿಯನ್ (52) ಎಂಬವರ ಮನೆಯಲ್ಲಿ ಈ ಕಳವು ಕೃತ್ಯ ನಡೆದಿದೆ. ಭಾನುವಾರ ಬೆಳಿಗ್ಗೆ ಮನೆ ಮಂದಿ ಧಾರ್ಮಿಕ ಸ್ಥಳಕ್ಕೆ ತೆರಳಿದ್ದು, ಕೆಲ ಹೊತ್ತಿನ ಬಳಿಕ ಹಿಂತಿರುಗಿ ಮನೆಗೆ ಬಂದು ನೋಡಿದಾಗ ಮನೆಯ ಎದುರಿನ ಬಾಗಿಲು ತೆರೆದಿತ್ತು. ಮನೆಯೊಳಗೆ ಹೋಗಿ ಪರಿಶೀಲಿಸಿದಾಗ 29 ಸಾವಿರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ 28 ಸಾವಿರ ರೂಪಾಯಿ ನಗದು ಹಣ ಕಳವುಗೈದಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment