ಕೈಕಂಬ : ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದು ಸವಾರರಿಬ್ಬರಿಗೆ ಗಾಯ - Karavali Times ಕೈಕಂಬ : ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದು ಸವಾರರಿಬ್ಬರಿಗೆ ಗಾಯ - Karavali Times

728x90

5 April 2024

ಕೈಕಂಬ : ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದು ಸವಾರರಿಬ್ಬರಿಗೆ ಗಾಯ

 ಬಂಟ್ವಾಳ, ಎಪ್ರಿಲ್ 05, 2024 (ಕರಾವಳಿ ಟೈಮ್ಸ್) : ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದು ಇಬ್ಬರು ಗಾಯಗೊಂಡ ಘಟನೆ ಬಿ ಮೂಡ ಗ್ರಾಮದ ಬಿ ಸಿ ರೋಡು ಸಮೀಪದ ಕೈಕಂಬ ಎಂಬಲ್ಲಿ ಶುಕ್ರವಾರ ಬೆಳಗ್ಗಿನ ಜಾವ ಸಂಭವಿಸಿದೆ. 

ಗಾಯಾಳನ್ನು ಬೈಕ್ ಸವಾರ ಶರೋನ್ ಹಾಗೂ ಸಹಸವಾರ ಸೆಬಾಸ್ಟಿಯನ್ ಎಂದು ಹೆಸರಿಸಲಾಗಿದೆ. ಶರೋನ್ ಅವರು ಸೆಬಾಸ್ಟಿಯನ್ ಅವರನ್ನು ಸಹಸವಾರರನ್ನಾಗಿ ಕುಳ್ಳಿರಿಸಿಕೊಂಡು ಬೈಕಿನಲ್ಲಿ ಬರುತ್ತಿದ್ದ ವೇಳೆ ಕೈಕಂಬ ಎಂಬಲ್ಲಿ ನಿಯಂತ್ರಣ ಮೀರಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಸವಾರರಿಬ್ಬರು ಬೈಕ್ ಸಮೇತ ರಸ್ತೆಗೆ ಬಿದ್ದು ಗಾಯಗೊಂಡಿದ್ದಾರೆ. ತಕ್ಷಣ ಸ್ಥಳೀಯರು ಇವರನ್ನು ತುಂಬೆ ಫಾದರ್ ಮುಲ್ಲರ್ಸ್ ಆಸ್ಪತ್ರೆಗೆ ಸಾಗಿಸಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಯುನಿಟಿ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿದೆ. ಈ ಬಗ್ಗೆ ಬಿ ಮೂಡ ಗ್ರಾಮದ ನಿವಾಸಿ ಅಬ್ದುಲ್ ಸಮದ್ ಅವರು ನೀಡಿದ ದೂರಿನಂತೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಕೈಕಂಬ : ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದು ಸವಾರರಿಬ್ಬರಿಗೆ ಗಾಯ Rating: 5 Reviewed By: karavali Times
Scroll to Top