ಬಂಟ್ವಾಳ : ಕಾರು ಡಿಕ್ಕಿ ಹೊಡೆದು ಬೈಕ್ ಸವಾರರಿಬ್ಬರು ಆಸ್ಪತ್ರೆಗೆ - Karavali Times ಬಂಟ್ವಾಳ : ಕಾರು ಡಿಕ್ಕಿ ಹೊಡೆದು ಬೈಕ್ ಸವಾರರಿಬ್ಬರು ಆಸ್ಪತ್ರೆಗೆ - Karavali Times

728x90

11 April 2024

ಬಂಟ್ವಾಳ : ಕಾರು ಡಿಕ್ಕಿ ಹೊಡೆದು ಬೈಕ್ ಸವಾರರಿಬ್ಬರು ಆಸ್ಪತ್ರೆಗೆ

ಬಂಟ್ವಾಳ, ಎಪ್ರಿಲ್ 11, 2024 (ಕರಾವಳಿ ಟೈಮ್ಸ್) : ಕಾರು ಡಿಕ್ಕಿ ಹೊಡೆದು ಬೈಕ್ ಸವಾರರಿಬ್ಬರು ರಸ್ತೆಗೆಸೆಯಲ್ಪಟ್ಟು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಬಿ ಕಸಬಾ ಗ್ರಾಮದ ತುಂಬ್ಯ ಜಂಕ್ಷನ್ ಎಂಬಲ್ಲಿ ಸಂಭವಿಸಿದೆ. 

ಗಾಯಾಳು ಬೈಕ್ ಸವಾರರನ್ನು ಮಹಮ್ಮದ್ ಅಫ್ರೀದ್ (17) ಹಾಗೂ ಮುಹಮ್ಮದ್ ಇರ್ಫಾನ್ (17) ಎಂದು ಹೆಸರಿಸಲಾಗಿದೆ. ಕಿರಣ್ ಕುಮಾರ್ ಎಂಬವರು ಚಲಾಯಿಸುತ್ತಿದ್ದ ಕಾರಿಗೆ ಬೈಕ್ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಬೈಕ್ ಸವಾರರಿಬ್ಬರು ಕೂಡಾ ರಸ್ತೆಗೆಸೆಯಲ್ಪಟ್ಟು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಯೇನಪೋಯ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಬಂಟ್ವಾಳ : ಕಾರು ಡಿಕ್ಕಿ ಹೊಡೆದು ಬೈಕ್ ಸವಾರರಿಬ್ಬರು ಆಸ್ಪತ್ರೆಗೆ Rating: 5 Reviewed By: karavali Times
Scroll to Top