ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ : 35.25 ಶೇಕಡಾ ವಿದ್ಯಾರ್ಥಿಗಳು ಪಾಸ್ - Karavali Times ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ : 35.25 ಶೇಕಡಾ ವಿದ್ಯಾರ್ಥಿಗಳು ಪಾಸ್ - Karavali Times

728x90

21 May 2024

ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ : 35.25 ಶೇಕಡಾ ವಿದ್ಯಾರ್ಥಿಗಳು ಪಾಸ್

ಪರೀಕ್ಷೆ-3 ರ ವೇಳಾಪಟ್ಟಿ ಪ್ರಕಟ : ಜೂನ್ 26 ರಿಂದ ಜುಲೈ5ರವರಗೆ ಪರೀಕ್ಷೆ, ಉತ್ತರ ಪತ್ರಿಕೆ ಸ್ಕ್ಯಾನ್ ಪ್ರತಿ ಪಡೆಯಲು ಮೇ 23 ಹಾಗೂ ಮರು ಮೌಲ್ಯಮಾಪನಕ್ಕೆ ಮೇ 25 ಕೊನೆ ದಿನಾಂಕ 


ಬೆಂಗಳೂರು, ಮೇ 21, 2024 (ಕರಾವಳಿ ಟೈಮ್ಸ್) : ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶ ಮಂಗಳವಾರ ಅಪರಾಹ್ನ ಪ್ರಕಟವಾಗಿದೆ. ಕರ್ನಾಟಕ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಮಂಗಳವಾರ ಅಪರಾಹ್ನ 3 ಗಂಟೆಗೆ ಫಲಿತಾಂಶ ಪ್ರಕಟಿಸಿದ್ದು, 35.25% ವಿದ್ಯಾರ್ಥಿಗಳು ಪಾಸಾಗಿದ್ದಾರೆ. 

ಎಪ್ರಿಲ್ 29 ರಿಂದ ಮೇ 16ರವರೆಗೆ ಪರೀಕ್ಷೆಗಳು ನಡೆದಿತ್ತು. ಪರೀಕ್ಷೆಗೆ ಒಟ್ಟು 1,48,942 ವಿದ್ಯಾರ್ಥಿಗಳು ಹಾಜರಾಗಿದ್ದು, ಈ ಪೈಕಿ 52,505 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಬಾಲಕರು 26,496 (31.31%) ಹಾಗೂ 26009 (40.44%) ಬಾಲಕಿಯರು ಪಾಸ್ ಆಗಿದ್ದಾರೆ.

ಸಂಯೋಜನೆವಾರು ಫಲಿತಾಂಶದಲ್ಲಿ ಕಲಾ ವಿಭಾಗದಲ್ಲಿ 11589 (22.24%) ವಾಣಿಜ್ಯ ವಿಭಾಗದಲ್ಲಿ 8709 (22.06%) ಮತ್ತು ವಿಜ್ಞಾನ ವಿಭಾಗದಲ್ಲಿ 32207 (56.16%) ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಪರೀಕ್ಷೆ-2 ಬರೆದ ವಿದ್ಯಾರ್ಥಿಗಳಲ್ಲಿ ಫಲಿತಾಂಶ ಸುಧಾರಣೆ ಬಯಸಿದ 32940 ವಿದ್ಯಾರ್ಥಿಗಳು ಸೇರಿದ್ದಾರೆ. 

ಪರೀಕ್ಷೆ-2 ರ ಉತ್ತರ ಪತ್ರಿಕೆ ಸ್ಕ್ಯಾನಿಂಗ್ ಪ್ರತಿಗೆ ಅರ್ಜಿ ಸಲ್ಲಿಕೆಗೆ ಮೇ 23 ಕೊನೆ ದಿನವಾಗಿದ್ದು, ಮರು ಮೌಲ್ಯಮಾಪನ, ಮರು ಎಣಿಕೆಗೆ ಅರ್ಜಿ ಸಲ್ಲಿಕೆಗೆ ಮೇ 25 ಕೊನೆ ದಿನಾಂಕವಾಗಿದೆ. 

ಇದೇ ವೇಳೆ ಪರೀಕ್ಷೆ-3 ವೇಳಾಪಟ್ಟಿಯನ್ನೂ ಮಂಡಳಿ ಪ್ರಕಟಿಸಿದೆ. ಪರೀಕ್ಷೆ-3ಕ್ಕೆ ಪರೀಕ್ಷಾ ಶುಲ್ಕ ಪಾವತಿಗೆ ದಂಡ ರಹಿತವಾಗಿ ಮೇ 23 ರಿಂದ 28ರವರೆಗೆ ಅವಕಾಶ ಕಲ್ಪಿಸಲಾಗಿದ್ದು, ದಂಡ ಸಹಿತವಾಗಿ ಮೇ 29 ರಿಂದ ಮೇ 30ರವರೆಗೆ ಅವಕಾಶ ಕಲ್ಪಿಸಲಾಗಿದೆ. ಜೂನ್ 26 ರಿಂದ ಜುಲೈ 5ರವರೆಗೆ ಪರೀಕ್ಷೆ-3 ನಡೆಯಲಿದೆ. ದ್ವಿತೀಯ ಪಿಯುಸಿ ಪರೀಕ್ಷೆ-1 ರಲ್ಲಿ 5,52,690 ವಿದ್ಯಾರ್ಥಿಗಳು ಪಾಸ್ ಆಗಿ 81.15% ಫಲಿತಾಂಶ ದಾಖಲಾಗಿತ್ತು. 

  • Blogger Comments
  • Facebook Comments

0 comments:

Post a Comment

Item Reviewed: ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ : 35.25 ಶೇಕಡಾ ವಿದ್ಯಾರ್ಥಿಗಳು ಪಾಸ್ Rating: 5 Reviewed By: karavali Times
Scroll to Top