ಬಂಟ್ವಾಳ, ಮೇ 30, 2024 (ಕರಾವಳಿ ಟೈಮ್ಸ್) : 2024-25ನೇ ಸಾಲಿನಲ್ಲಿ ಪ್ರಥಮ ವರ್ಷ ಡಿಪ್ಲೋಮಾ ಪ್ರವೇಶ ಸಂಬಂಧ ಬಂಟ್ವಾಳ ಸರಕಾರಿ ಪಾಲಿಟೆಕ್ನಿಕ್ ಇಲ್ಲಿ ಆನ್ ಲೈನ್ ಪ್ರವೇಶ ಪ್ರಕ್ರಿಯೆಯ ಮುಖಾಂತರ ಸೀಟು ಹಂಚಿಕೆಯಾದ ನಂತರ ಭರ್ತಿಯಾಗದ ಉಳಿಕೆ ಸೀಟುಗಳನ್ನು ಪ್ರಾಂಶುಪಾಲರ ಹಂತದಲ್ಲಿಯೇ ಆಫ್ ಲೈನ್ ಮೂಲಕ ಮೆರಿಟ್ ಮತ್ತು ರೋಸ್ಟರ್ ಅನುಗುಣವಾಗಿ ಸೀಟು ಹಂಚಿಕೆ ಮಾಡಲಾಗುವುದು. ಈ ಸಂಬಂಧ ಎಸ್ಸೆಸ್ಸೆಲ್ಸಿ / ತತ್ಸಮಾನ ಪರೀಕ್ಷೆಯಲ್ಲಿ ಪಾಸಾಗಿರುವ ಅರ್ಹ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ.
ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶ ಬಯಸುವ ಅರ್ಹ ಆಸಕ್ತ ಅಭ್ಯರ್ಥಿಗಳು ಜೂನ್ 5 ರ ಸಂಜೆ 4 ಗಂಟೆಯೊಳಗೆ ಬಂಟ್ವಾಳ ಸರಕಾರಿ ಪಾಲಿಟೆಕ್ನಿಕ್ ಕಛೇರಿಗೆ ಕಚೇರಿ ಸಮಯದಲ್ಲಿ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. ಹಾಗೂ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಮೆರಿಟ್ ಪಟ್ಟಿಯನ್ನು ಜೂನ್ 5 ರ ಸಂಜೆ 5 ಗಂಟೆಗೆ ಪ್ರಕಟಿಸಲಾಗುವುದು. ಸೀಟು ಆಯ್ಕೆ ಮಾಡಿಕೊಂಡ ಅಭ್ಯರ್ಥಿಗಳು ನಿಗದಿತ ಶುಲ್ಕದೊಂದಿಗೆ ಪ್ರವೇಶ ಪಡೆಯಲು ಜೂನ್ 6 ಕೊನೆ ದಿನ ಆಗಿರುತ್ತದೆ ಎಂದು ಬಂಟ್ವಾಳ ಸರಕಾರಿ ಪಾಲಿಟೆಕ್ನಿಕ್ ಸಂಸ್ಥೆಯ ಪ್ರಾಂಶುಪಾಲರ ಪ್ರಕಟಣೆ ತಿಳಿಸಿದೆ.
0 comments:
Post a Comment