ಬಿ.ಸಿ.ರೋಡು ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಬೈಕ್ ಕಳವು : ನಗರ ಠಾಣೆಯಲ್ಲಿ ದೂರು ದಾಖಲು - Karavali Times ಬಿ.ಸಿ.ರೋಡು ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಬೈಕ್ ಕಳವು : ನಗರ ಠಾಣೆಯಲ್ಲಿ ದೂರು ದಾಖಲು - Karavali Times

728x90

15 May 2024

ಬಿ.ಸಿ.ರೋಡು ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಬೈಕ್ ಕಳವು : ನಗರ ಠಾಣೆಯಲ್ಲಿ ದೂರು ದಾಖಲು

ಬಂಟ್ವಾಳ, ಮೇ 15, 2024 (ಕರಾವಳಿ ಟೈಮ್ಸ್) : ಬಿ ಸಿ ರೋಡು ಕೆ ಎಸ್ ಆರ್ ಟಿ ಸಿ ಬಸ್ಸು ನಿಲ್ದಾಣಲ್ಲಿ ಮೇ 3 ರಂದು ನಿಲ್ಲಿಸಿದ್ದ ಬೈಕ್ ಕಳವಾಗಿರುವ ಬಗ್ಗೆ ಗುರುವಾರ ಬಂಟ್ವಾಳ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. 

ಆಳಂದ-ಕೋಣಸಂಗಿ ನಿವಾಸಿ ಬಸವರಾಜ್ (40) ಅವರಿಗೆ ಸೇರಿದ ಬೈಕ್ ಕಳವಾಗಿದೆ. ಇವರು ತನ್ನ ಕೆಎ02 ಎಚ್ ಪಿ 5336 ನೋಂದಣಿ ಸಂಖ್ಯೆಯ ಬೈಕನ್ನು ಮೇ 3 ರಂದು ಬೆಳಿಗ್ಗೆ ಬಿ ಮೂಡ ಗ್ರಾಮದ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದಲ್ಲಿ ನಿಲ್ಲಿಸಿ ಮಂಗಳೂರಿಗೆ ತೆರಳಿದ್ದು, ಮೇ 4 ರಂದು ರಾತ್ರಿ ವಾಪಾಸು ಬಂದು ನೋಡಿದಾಗ ಬೈಕ್ ಕಳವಾಗಿರುವುದು ಬೆಳಕಿಗೆ ಬಂದಿದೆ. ಕಳವಾಗಿರುವ ಬೈಕಿನ ಮೌಲ್ಯ 35 ಸಾವಿರ ರೂಪಾಯಿ ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಬಸವರಾಜ್ ನೀಡಿದ ದೂರಿನಂತೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • Blogger Comments
  • Facebook Comments

0 comments:

Post a Comment

Item Reviewed: ಬಿ.ಸಿ.ರೋಡು ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಬೈಕ್ ಕಳವು : ನಗರ ಠಾಣೆಯಲ್ಲಿ ದೂರು ದಾಖಲು Rating: 5 Reviewed By: karavali Times
Scroll to Top