ಅಕ್ರಮ ಗಣಿಗಾರಿಕೆ ಆರೋಪಿಯ ಕಾನೂನು ಬಾಹಿರ ಬಿಡುಗಡೆಗೆ ಒತ್ತಡ ಹಾಕಿ ಪೊಲೀಸ್ ಠಾಣೆಯಲ್ಲಿ ರಂಪಾಟ ನಡೆಸಿದ ಶಾಸಕ ಹರೀಶ್ ಪೂಂಜಾ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಎಫ್.ಐ.ಆರ್. ದಾಖಲು - Karavali Times ಅಕ್ರಮ ಗಣಿಗಾರಿಕೆ ಆರೋಪಿಯ ಕಾನೂನು ಬಾಹಿರ ಬಿಡುಗಡೆಗೆ ಒತ್ತಡ ಹಾಕಿ ಪೊಲೀಸ್ ಠಾಣೆಯಲ್ಲಿ ರಂಪಾಟ ನಡೆಸಿದ ಶಾಸಕ ಹರೀಶ್ ಪೂಂಜಾ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಎಫ್.ಐ.ಆರ್. ದಾಖಲು - Karavali Times

728x90

19 May 2024

ಅಕ್ರಮ ಗಣಿಗಾರಿಕೆ ಆರೋಪಿಯ ಕಾನೂನು ಬಾಹಿರ ಬಿಡುಗಡೆಗೆ ಒತ್ತಡ ಹಾಕಿ ಪೊಲೀಸ್ ಠಾಣೆಯಲ್ಲಿ ರಂಪಾಟ ನಡೆಸಿದ ಶಾಸಕ ಹರೀಶ್ ಪೂಂಜಾ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಎಫ್.ಐ.ಆರ್. ದಾಖಲು

 ಬೆಳ್ತಂಗಡಿ, ಮೇ 19, 2024 (ಕರಾವಳಿ ಟೈಮ್ಸ್) : ಬೆಳ್ತಂಗಡಿ ಪೆÇಲೀಸ್ ಠಾಣಾ ವ್ಯಾಪ್ತಿಯ ಮೇಲಂತಬೆಟ್ಟು ಎಂಬಲ್ಲಿ ನಡೆಯುತ್ತಿದ್ದ, ಅಕ್ರಮ ಕಲ್ಲುಗಣಿಗಾರಿಕೆ ಹಾಗೂ ಸದ್ರಿ ಗಣಿಗಾರಿಕೆಗಾಗಿ ಶೇಖರಿಸಲಾಗಿದ್ದ, ಅಪಾಯಕಾರಿ ಸ್ಪೋಟಕಗಳ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದ್ದ ಆರೋಪಿ ರೌಡಿಶೀಟರ್ ಶಶಿರಾಜ್ ಪರವಾಗಿ ಠಾಣೆಗೆ ಆಗಮಿಸಿ ಆತನ ಬಿಡುಗಡೆಗಾಗಿ ಒತ್ತಡ ಹಾಕಿದ್ದಲ್ಲದೆ ಠಾಣೆಯಲ್ಲ ಕರ್ತವ್ಯದಲ್ಲಿದ್ದ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. 

ಮೇಲಂತಬೆಟ್ಟು ಎಂಬಲ್ಲಿ ನಡೆಯುತ್ತಿದ್ದ ಅಕ್ರಮ ಕಲ್ಲುಗಣಿಗಾರಿಕೆ ಹಾಗೂ ಸದ್ರಿ ಗಣಿಗಾರಿಕೆಗಾಗಿ ಶೇಖರಿಸಲಾಗಿದ್ದ, ಅಪಾಯಕಾರಿ ಸ್ಪೋಟಕಗಳ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಪ್ರಮೋದ್ ಉಜಿರೆ ಹಾಗೂ ಶಶಿರಾಜ್ ಶೆಟ್ಟಿ (35) ಎಂಬವರುಗಳ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಶನಿವಾರ ಪ್ರಕರಣ ದಾಖಲಾಗಿತ್ತು. ಆರೋಪಿಗಳ ಪೈಕಿ ಶಶಿರಾಜ್ ಶೆಟ್ಟಿ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ತನಿಖೆ ನಡೆಸುತ್ತಿದ್ದರು. ಸದ್ರಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಂಧಿತ ಪ್ರಮುಖ ಆರೋಪಿ ಹಾಗೂ ಬೆಳ್ತಂಗಡಿ ಠಾಣಾ ವ್ಯಾಪ್ತಿಯ ರೌಡಿಶೀಟರ್ ಆಗಿರುವ ಶಶಿರಾಜ್ ಪರವಾಗಿ, ಬೆಳ್ತಂಗಡಿ ವಿಧಾನಸಭಾ ಶಾಸಕ ಹರೀಶ್ ಪೂಂಜಾ ಅವರು, ಇತರ ಕೆಲವು ಜನರೊಂದಿಗೆ ಶನಿವಾರ ರಾತ್ರಿ ಬೆಳ್ತಂಗಡಿ ಠಾಣೆಗೆ ಭೇಟಿ ನೀಡಿ ಆರೋಪಿಯು ಶಾಸಕರ ಪಕ್ಷದ ಕಾರ್ಯಕರ್ತನಾಗಿದ್ದು, ಆತನನ್ನು ಕಾನೂನು ಬಾಹಿರವಾಗಿ ಬಿಡುಗಡೆ ಮಾಡುವಂತೆ ಠಾಣಾಧಿಕಾರಿಗಳಿಗೆ ಒತ್ತಡ ಹಾಕಿ, ಅವ್ಯಾಚವಾಗಿ ಬೈದು ಬೆದರಿಸಿರುತ್ತಾರೆ ಹಾಗೂ ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ, ಪೆÇಲೀಸ್ ಇಲಾಖೆಯ ಬಗ್ಗೆ ಮತ್ತು ಪೆÇಲೀಸ್ ಅಧಿಕಾರಿಗಳ ಬಗ್ಗೆ ಅಸಂವಿಧಾನಿಕ ಶಬ್ದಗಳಲ್ಲಿ ಮಾತನಾಡಿ, ದುರ್ವರ್ತನೆ ತೋರಿರುತ್ತಾರೆ ಎಂದಿರುವ ಪೊಲೀಸರು ಈ ಬಗ್ಗೆ ಶಾಸಕ ಹರೀಶ್ ಪೂಂಜಾ ಅವರ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಅಪರಾಧ ಕ್ರಮಾಂಕ 57/2024, ಕಲಂ 353, 504 ಐಪಿಸಿಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಅಕ್ರಮ ಗಣಿಗಾರಿಕೆ ಆರೋಪಿಯ ಕಾನೂನು ಬಾಹಿರ ಬಿಡುಗಡೆಗೆ ಒತ್ತಡ ಹಾಕಿ ಪೊಲೀಸ್ ಠಾಣೆಯಲ್ಲಿ ರಂಪಾಟ ನಡೆಸಿದ ಶಾಸಕ ಹರೀಶ್ ಪೂಂಜಾ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಎಫ್.ಐ.ಆರ್. ದಾಖಲು Rating: 5 Reviewed By: karavali Times
Scroll to Top