ಪ್ರಾಕೃತಿಕ ವಿಕೋಪ ನಿರ್ವಹಣೆ ಬಗ್ಗೆ ಬಂಟ್ವಾಳ ತಹಶೀಲ್ದಾರ್ ನೇತೃತ್ವದಲ್ಲಿ ವಿಶೇಷ ಸಭೆ : ಮುಂಜಾಗ್ರತಾ ಕ್ರಮಗಳ ಬಗ್ಗೆ ತೀರ್ಮಾನ - Karavali Times ಪ್ರಾಕೃತಿಕ ವಿಕೋಪ ನಿರ್ವಹಣೆ ಬಗ್ಗೆ ಬಂಟ್ವಾಳ ತಹಶೀಲ್ದಾರ್ ನೇತೃತ್ವದಲ್ಲಿ ವಿಶೇಷ ಸಭೆ : ಮುಂಜಾಗ್ರತಾ ಕ್ರಮಗಳ ಬಗ್ಗೆ ತೀರ್ಮಾನ - Karavali Times

728x90

4 May 2024

ಪ್ರಾಕೃತಿಕ ವಿಕೋಪ ನಿರ್ವಹಣೆ ಬಗ್ಗೆ ಬಂಟ್ವಾಳ ತಹಶೀಲ್ದಾರ್ ನೇತೃತ್ವದಲ್ಲಿ ವಿಶೇಷ ಸಭೆ : ಮುಂಜಾಗ್ರತಾ ಕ್ರಮಗಳ ಬಗ್ಗೆ ತೀರ್ಮಾನ

ಬಂಟ್ವಾಳ, ಮೇ 04, 2024 (ಕರಾವಳಿ ಟೈಮ್ಸ್) : ಕುಡಿಯುವ ನೀರಿನ ಸಮಸ್ಯೆ ಮತ್ತು ಪ್ರಾಕೃತಿಕ ವಿಕೋಪ ನಿರ್ವಹಣೆ ಬಗ್ಗೆ ಶುಕ್ರವಾರ ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೀಡಲಾಗಿರುವ ನಿರ್ದೇಶನದಂತೆ ಶನಿವಾರ ಬಿ ಸಿ ರೋಡಿನ ತಾಲೂಕು ಪಂಚಾಯತ್ ಎಸ್ ಜೆ ಎಸ್ ಆರ್ ವೈ ಸಭಾಂಗಣದಲ್ಲಿ ಬಂಟ್ವಾಳ ತಹಶೀಲ್ದಾರ್ ಅರ್ಚನಾ ಭಟ್ ಅವರ ಅಧ್ಯಕ್ಷತೆಯಲ್ಲಿ ವಿಶೇಷ ಸಭೆ ನಡೆಯಿತು. 

ಸಭೆಯಲ್ಲಿ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆದು, ಕೆಲವೊಂದು ತೀರ್ಮಾನಕ್ಕೆ ಬರಲಾಗಿದೆ. ನಗರ ಮತ್ತು ಗ್ರಾಮ ಮಟ್ಟದಲ್ಲಿ ಪ್ರಾಕೃತಿಕ ವಿಕೋಪ ನಿರ್ವಹಣೆ ಬಗ್ಗೆ ಕ್ರಿಯಾ ಯೋಜನೆ ಸಿದ್ದಪಡಿಸುವುದು, ಅಪಾಯಕಾರಿ ಪ್ರದೇಶಗಳು ಅಂದರೆ ಪ್ರವಾಹ, ಭೂ ಕುಸಿತ ಉಂಟಾಗಬಹುದಾದ ಸ್ಥಳಗಳನ್ನು ಗುರುತಿಸುವುದು ಮತ್ತು ವಿಪರೀತ ಮಳೆಯ ಸಮಯ ಸದ್ರಿ ಪ್ರದೇಶಗಳಲ್ಲಿ ತೀವ್ರ ನಿಗಾ ವಹಿಸುವುದು, ಗಣಿಗಾರಿಕೆಯಿಂದ ಉಂಟಾಗಿರುವ ಹೊಂಡಗಳಲ್ಲಿ ಮಳೆಗಾಲದಲ್ಲಿ ನೀರು ನಿಂತು ಜನ -ಜಾನುವಾರುಗಳ ಜೀವ ಹಾನಿಯಾಗುವ ಸಂಭವ ಇರುವುದರಿಂದ ಸದ್ರಿ ಪ್ರದೇಶಗಳಲ್ಲಿ ಸುತ್ತಲೂ ಬೇಲಿ ಅಥವಾ ತಡೆ ನಿರ್ಮಿಸಿ ಸುರಕ್ಷತಾ ಕ್ರಮ ಕೈಗೊಳ್ಳುವುದು ಹಾಗೂ ಆ ಕಡೆ ತೆರಳದಂತೆ ಎಚ್ಚರಿಕೆ ಫಲಕ ಅಳವಡಿಸುವುದು, ಶಾಲಾ-ಕಾಲೇಜು ಹಾಗೂ ಅಂಗನವಾಡಿ ಕಟ್ಟಡಗಳನ್ನು ಪರಿಶೀಲಿಸಿ ಸುಸ್ಥಿತಿಯಲ್ಲಿ ಇರುವಂತೆ ಕ್ರಮವಹಿಸುವುದು, ಗ್ರಾಮ ಪಂಚಾಯಿತಿ, ಜಿಲ್ಲಾ ಪಂಚಾಯತ್, ಪಿಡಬ್ಲ್ಯುಡಿ ರಸ್ತೆಗಳ ಇಕ್ಕೆಳಗಲ್ಲಿ ಇರುವ ಚರಂಡಿಗಳಲ್ಲಿ ನೀರು ಸರಾಗವಾಗಿ ಹರಿದು ಹೋಗುವಂತೆ ಕಸ ಕಡ್ಡಿಗಳನ್ನು ತೆಗೆದು ಸ್ವಚ್ಛಗೊಳಿಸುವುದು ಎಂಬಿತ್ಯಾದಿ ತೀರ್ಮಾನ ಕೈಗೊಳ್ಳಲಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಪ್ರಾಕೃತಿಕ ವಿಕೋಪ ನಿರ್ವಹಣೆ ಬಗ್ಗೆ ಬಂಟ್ವಾಳ ತಹಶೀಲ್ದಾರ್ ನೇತೃತ್ವದಲ್ಲಿ ವಿಶೇಷ ಸಭೆ : ಮುಂಜಾಗ್ರತಾ ಕ್ರಮಗಳ ಬಗ್ಗೆ ತೀರ್ಮಾನ Rating: 5 Reviewed By: karavali Times
Scroll to Top