ಬಂಟ್ವಾಳದಲ್ಲಿ ಗಾಳಿ ಮಳೆಗೆ ವಿವಿಧೆಡೆ ಮನೆಗಳಿಗೆ ಹಾನಿ, ಅಪಾರ ನಷ್ಟ - Karavali Times ಬಂಟ್ವಾಳದಲ್ಲಿ ಗಾಳಿ ಮಳೆಗೆ ವಿವಿಧೆಡೆ ಮನೆಗಳಿಗೆ ಹಾನಿ, ಅಪಾರ ನಷ್ಟ - Karavali Times

728x90

12 May 2024

ಬಂಟ್ವಾಳದಲ್ಲಿ ಗಾಳಿ ಮಳೆಗೆ ವಿವಿಧೆಡೆ ಮನೆಗಳಿಗೆ ಹಾನಿ, ಅಪಾರ ನಷ್ಟ

ಬಂಟ್ವಾಳ, ಮೇ 12, 2024 (ಕರಾವಳಿ ಟೈಮ್ಸ್) : ತಾಲೂಕಿನಲ್ಲಿ ಭಾನುವಾರ ಸಂಜೆ ಬೀಸಿದ ಗಾಳಿ ಹಾಗೂ ಮಳೆಗೆ ಕೆಲವೆಡೆ ಹಾನಿ ಸಂಭವಿಸಿದ್ದು, ನಷ್ಟ ಸಂಭವಿಸಿದೆ. ವಿಟ್ಲ ಪಡ್ನೂರು ಗ್ರಾಮದ ಕೋಡಪದವು ಶಾಲಾ ಕಟ್ಟಡದ ಮೇಲ್ಛಾವಣಿ ಗಾಳಿಯಿಂದಾಗಿ ಹಾನಿಯಾಗಿದೆ. ವೀರಕಂಭ ಗ್ರಾಮದ ಮಜಿ ಎಂಬಲ್ಲಿನ ನಿವಾಸಿ ಸರೋಜಿನಿ ಕೋಂ ಶಿವಪ್ಪ ಅವರ ಮನೆ ಮೇಲೆ ತೆಂಗಿನ ಮರ ಬಿದ್ದು ತೀವ್ರ ಹಾನಿ ಸಂಭವಿಸಿದೆ. ಪುಣಚ ಗ್ರಾಮದ ನಾರ್ಣಡ್ಕ ನಿವಾಸಿ ವಾಸು ನಾಯ್ಕ ಎಂಬವರ ವಾಸ್ತವ್ಯದ ಮನೆಗೆ ಮರ ಬಿದ್ದು ಹಾನಿಯಾಗಿದೆ. ಅಳಿಕೆ ಗ್ರಾಮದ ಚೆಂದುಕಳ ನಿವಾಸಿ ಹನೀಫ್ ಅವರ ಮನೆಗೆ ಮರ ಬಿದ್ದು ಭಾಗಶಃ ಹಾನಿ ಸಂಭವಿಸಿದೆ ಎಂದು ತಾಲೂಕು ಕಚೇರಿ ಪ್ರಕಟಣೆ ತಿಳಿಸಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಬಂಟ್ವಾಳದಲ್ಲಿ ಗಾಳಿ ಮಳೆಗೆ ವಿವಿಧೆಡೆ ಮನೆಗಳಿಗೆ ಹಾನಿ, ಅಪಾರ ನಷ್ಟ Rating: 5 Reviewed By: karavali Times
Scroll to Top