ಬೆಂಗಳೂರು, ಮೇ 18, 2024 (ಕರಾವಳಿ ಟೈಮ್ಸ್) : ಎಸ್ಸೆಸ್ಸೆಲ್ಸಿ ಮುಖ್ಯ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಹಾಗೂ ಫಲಿತಾಂಶ ಉತ್ತಮ ಪಡಿಸಿಕೊಳ್ಳಲು ಉದ್ದೇಶಿಸುವ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ನಡೆಸಲ್ಪಡುವ ಎಸ್ಸೆಸ್ಸೆಲ್ಸಿ ಪರೀಕ್ಷೆ-2 ರ ಪರಿಷ್ಕøತ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಶನಿವಾರ ಪ್ರಕಟಿಸಿದೆ. ಪರಿಷ್ಕøತ ವೇಳಾಪಟ್ಟಿಯಂತೆ ಜೂನ್ 14 ರಿಂದ 22 ರವರೆಗೆ ಪರೀಕ್ಷೆಗಳು ನಡೆಯಲಿದೆ.
ಈ ಹಿಂದೆ ಜೂನ್ 7 ರಿಂದ 14ರವರೆಗೆ ಪರೀಕ್ಷೆ ನಡೆಸುವುದಾಗಿ ಮಂಡಳಿ ವೇಳಾಪಟ್ಟಿ ಪ್ರಕಟಿಸಿತ್ತು. ಆದರೆ ಬಳಿಕ ಸದ್ರಿ ವೇಳಾಪಟ್ಟಿಯನ್ನು ರದ್ದುಗೊಳಿಸಿ ಮುಂದಿನ ವೇಳಾಪಟ್ಟಿ ಶೀಘ್ರ ಬಿಡುಗಡೆಗೊಳಿಸುವುದಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಹೇಳಿತ್ತು. ಅದರಂತೆ ಇದೀಗ ಪರಿಷ್ಕøತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.
ವೇಳಾಪಟ್ಟಿ ಹೀಗಿದೆ
ಜೂನ್ 14 ರಂದು ಪ್ರಥಮ ಭಾಷೆ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಇಂಗ್ಲಿಷ್ (ಎನ್ ಸಿ ಇ ಆರ್ ಟಿ), ಸಂಸ್ಕೃತ, ಜೂನ್ 15 ರಂದು ತೃತೀಯ ಭಾಷೆ ಹಿಂದಿ, ಕನ್ನಡ, ಇಂಗ್ಲಿಷ್, ಪರ್ಷಿಯನ್, ಅರೇಬಿಕ್, ಸಂಸ್ಕೃತ, ಕೊಂಕಣಿ, ಉರ್ದು, ತುಳು ಮತ್ತು ಎನ್ ಎಸ್ ಕ್ಯು ಎಫ್ ವಿಷಯಗಳು, ಜೂನ್ 18 ರಂದು ಗಣಿತ/ ಸಮಾಜ ಶಾಸ್ತ್ರ, ಜೂನ್ 19 ರಂದು ಎಲಿಮೆಂಟ್ಸ್ ಆಫ್ ಮೆಕ್ಯಾನಿಕಲ್ ಇಂಜಿನಿಯರಿಂಗ್ 4, ಇಂಜಿನಿಯರಿಂಗ್ ಗ್ರಾಫಿಕ್ಸ್2, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ 4, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್, ‘ಸಿ’ ನಲ್ಲಿ ಪೆÇ್ರೀಗ್ರಾಮಿಂಗ್, ಕಂಪ್ಯೂಟರ್ ಸೈನ್ಸ್, ಅರ್ಥಶಾಸ್ತ್ರ, ಜೂನ್ 20 ರಂದು ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ, ಕರ್ನಾಟಕ ಸಂಗೀತ/ ಹಿಂದೂಸ್ತಾನಿ ಸಂಗೀತ, ಜೂನ್ 21 ರಂದು ದ್ವಿತೀಯ ಭಾಷೆ ಇಂಗ್ಲಿಷ್, ಕನ್ನಡ, ಜೂನ್ 22 ರಂದು ಸಮಾಜ ವಿಜ್ಞಾನ ಪರೀಕ್ಷೆಗಳು ನಡೆಯಲಿದೆ ಎಂದು ಮಂಡಳಿ ಪ್ರಕಟಣೆ ತಿಳಿಸಿದೆ.
0 comments:
Post a Comment