ಸಜಿಪಮೂಡ : ಕಾರು ಡಿಕ್ಕಿಯಾಗಿ ಬೈಕ್ ಸವಾರಗೆ ಗಂಭೀರ ಗಾಯ - Karavali Times ಸಜಿಪಮೂಡ : ಕಾರು ಡಿಕ್ಕಿಯಾಗಿ ಬೈಕ್ ಸವಾರಗೆ ಗಂಭೀರ ಗಾಯ - Karavali Times

728x90

21 May 2024

ಸಜಿಪಮೂಡ : ಕಾರು ಡಿಕ್ಕಿಯಾಗಿ ಬೈಕ್ ಸವಾರಗೆ ಗಂಭೀರ ಗಾಯ

ಬಂಟ್ವಾಳ, ಮೇ 22, 2024 (ಕರಾವಳಿ ಟೈಮ್ಸ್) : ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಸಜಿಪಮೂಡ ಗ್ರಾಮದ ಸುಭಾಶ್ ನಗರ ಎಂಬಲ್ಲಿ ಸೋಮವಾರ ಸಂಜೆ ಸಂಭವಿಸಿದೆ. 

ಗಾಯಾಳು ಬೈಕ್ ಸವಾರನನ್ನು ಅಬ್ದುಲ್ಲಾಬಿ ಸಿದ್ದೀಕ್ (26) ಎಂದು ಹೆಸರಿಸಲಾಗಿದೆ. ಮೆಲ್ಕಾರ್-ಮುಡಿಪು ರಾಜ್ಯ ಹೆದ್ದಾರಿಯಲ್ಲಿ ಅಹಮ್ಮದ್ ಎಂಬವರು ಚಲಾಯಿಸಿಕೊಂಡು ಬಂದ ಕಾರು ಬೈಕಿಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದ್ದು, ಕಾರು ಚಾಲಕನ ದುಡುಕುತನವೇ ಅಪಘಾತಕ್ಕೆ ಕಾರಣ ಎಂದು ದೂರಲಾಗಿದೆ. ಅಪಘಾತದಿಂದ ರಸ್ತೆಗೆಸೆಯಲ್ಪಟ್ಟ ಬೈಕ್ ಸವಾರ ಅಬ್ದುಲ್ಲಾಬಿ ಸಿದ್ದೀಕ್ ಅವರು ಗಂಭೀರ ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಯುನಿಟಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ದಾಖಲಿಸಲಾಗಿದೆ. ಈ ಬಗ್ಗೆ ಸಜಿಪಮುನ್ನೂರು ನಿವಾಸಿ ಮಹಮ್ಮದ್ ಇಕ್ಬಾಲ್ ಅವರು ನೀಡಿದ ದೂರಿನಂತೆ ಬಂಟ್ವಾಳ ಸಂಚಾgರಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಸಜಿಪಮೂಡ : ಕಾರು ಡಿಕ್ಕಿಯಾಗಿ ಬೈಕ್ ಸವಾರಗೆ ಗಂಭೀರ ಗಾಯ Rating: 5 Reviewed By: karavali Times
Scroll to Top