ಬಂಧಿತ ರೌಡಿಶೀಟರ್ ಪರ ಅನುಮತಿ ಇಲ್ಲದೆ ಕಾನೂನು ಬಾಹಿರ ಪ್ರತಿಭಟನೆ ನಡೆಸಿ ಪೊಲೀಸರಿಗೆ ಬೆದರಿಕೆ ಹಾಕಿದ ಬೆಳ್ತಂಗಡಿ ಶಾಸಕರ ಪಟಾಲಂ ವಿರುದ್ದ ಪ್ರಕರಣ ದಾಖಲು - Karavali Times ಬಂಧಿತ ರೌಡಿಶೀಟರ್ ಪರ ಅನುಮತಿ ಇಲ್ಲದೆ ಕಾನೂನು ಬಾಹಿರ ಪ್ರತಿಭಟನೆ ನಡೆಸಿ ಪೊಲೀಸರಿಗೆ ಬೆದರಿಕೆ ಹಾಕಿದ ಬೆಳ್ತಂಗಡಿ ಶಾಸಕರ ಪಟಾಲಂ ವಿರುದ್ದ ಪ್ರಕರಣ ದಾಖಲು - Karavali Times

728x90

21 May 2024

ಬಂಧಿತ ರೌಡಿಶೀಟರ್ ಪರ ಅನುಮತಿ ಇಲ್ಲದೆ ಕಾನೂನು ಬಾಹಿರ ಪ್ರತಿಭಟನೆ ನಡೆಸಿ ಪೊಲೀಸರಿಗೆ ಬೆದರಿಕೆ ಹಾಕಿದ ಬೆಳ್ತಂಗಡಿ ಶಾಸಕರ ಪಟಾಲಂ ವಿರುದ್ದ ಪ್ರಕರಣ ದಾಖಲು

ಬೆಳ್ತಂಗಡಿ, ಮೇ 21, 2024 (ಕರಾವಳಿ ಟೈಮ್ಸ್) : ಬೆಳ್ತಂಗಡಿ ಪೊಲೀಸ್ ಠಾಣಾ ರೌಡಿ ಶೀಟರ್ ಬಂಧನ ವಿರೋಧಿಸಿ ಪೂರ್ವಾನುಮತಿ ಪಡೆಯದೆ ಶಾಸಕರ ನೇತೃತ್ವದಲ್ಲಿ ನಡೆದ ಪ್ರತಿಭಟನೆ, ಪೊಲೀಸರಿಗೆ ಧಮ್ಕಿ ಹಾಕಿದ ಹಾಗೂ ಸಾರ್ವಜನಿಕರನ್ನು ತಾಲೂಕು ಕಚೇರಿಗೆ ಪ್ರವೇಶಿಸಿದಂತೆ ನಿರ್ಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಮೇ 18 ರಂದು ಅಕ್ರಮ ಗಣಿಗಾರಿಕೆ ಹಾಗೂ ಸ್ಫೋಟಕ ಕಾಯ್ದೆ ಪ್ರಕಾರ ಆರೋಪಿ ಹಾಗೂ ಬೆಳ್ತಂಗಡಿ ಠಾಣಾ ವ್ಯಾಪ್ತಿಯ ರೌಡಿ ಶೀಟರ್ ಆಗಿರುವ ಶಶಿರಾಜ್  ಶೆಟ್ಟಿ ಎಂಬಾತನ ಬಂಧನವನ್ನು ವಿರೋಧಿಸಿ, ಮೇ 20 ರಂದು, ಸಂಬಂಧಪಟ್ಟ ಇಲಾಖೆಯಿಂದ ಯಾವುದೇ ಪೂರ್ವಾನುಮತಿ ಪಡೆಯದೇ, ಕಾನೂನುಬಾಹಿರವಾಗಿ,  ಬೆಳ್ತಂಗಡಿ ಮಿನಿ ವಿಧಾನಸೌಧದ ಮುಂಭಾಗದಲ್ಲಿ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ಹಾಗೂ ಇತರರು ಜನರನ್ನು ಗುಂಪು ಸೇರಿಸಿ ಪ್ರತಿಭಟನಾ ಸಭೆ ನಡೆಸಿರುತ್ತಾರೆ. ಸದ್ರಿ ಪ್ರತಿಭಟನಾ ಸಭೆಯಲ್ಲಿ ಶಾಸಕ ಹರೀಶ್ ಪೂಂಜ ಅವರು ಪ್ರಸ್ತುತ ಅರೆಸ್ಟ್ ಆಗಿರುವ ಕಾರ್ಯಕರ್ತರಿಗಾಗಿ, ಪೆÇಲೀಸರ ಕಾಲರ್ ಹಿಡಿಯಲು ಸಿದ್ದನೆಂದು ಹಾಗೂ ಬೆಂಗಳೂರಿನ ಡಿ.ಜೆ ಹಳ್ಳಿ, ಕೆ.ಜೆ ಹಳ್ಳಿಯ ಪೆÇಲೀಸ್ ಠಾಣೆಗೆ ಆದ ಗತಿಯನ್ನು ಬೆಳ್ತಂಗಡಿ ಠಾಣೆಗೂ ಕಾಣಿಸುತ್ತೇನೆಂದು ಬೆದರಿಸಿ, ಸಾರ್ವಜನಿಕ ನೌಕರರಾದ, ಬೆಳ್ತಂಗಡಿ ಠಾಣಾ ಪೆÇಲೀಸ್ ನಿರೀಕ್ಷಕರಿಗೆ ಮತ್ತು ಇತರೆ ಪೆÇಲೀಸ್ ಅಧಿಕಾರಿಗಳಿಗೆ ಹಾಗೂ ಪೆÇಲೀಸ್ ಇಲಾಖೆಗೆ ಅವ್ಯಾಚ ಶಬ್ದಗಳಿಂದ ನಿಂದಿಸಿ, ಅವಮಾನ ಮಾಡಿ, ಜೀವ ಬೆದರಿಕೆ ಒಡ್ಡಿರುತ್ತಾರೆ ಹಾಗೂ ತಾಲೂಕು ಕಚೇರಿಗೆ ತಮ್ಮ ಕೆಲಸ ಕಾರ್ಯಗಳಿಗಾಗಿ ಬರುವ ಸಾರ್ವಜನಿಕರು ಹೋಗದಂತೆ ತಡೆಯೊಡ್ಡಿರುತ್ತಾರೆ ಎಂದು ಆರೋಪಿಸಲಾಗಿದ್ದು, ಈ ಬಗ್ಗೆ ಬೆಳ್ತಂಗಡಿ ಪೆÇಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 58/2024, ಕಲಂ 143, 147, 341, 504, 506 ಜೊತೆಗೆ 149 ಐಪಿಸಿಯಂತೆ ಪ್ರಕರಣ ದಾಖಲಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಬಂಧಿತ ರೌಡಿಶೀಟರ್ ಪರ ಅನುಮತಿ ಇಲ್ಲದೆ ಕಾನೂನು ಬಾಹಿರ ಪ್ರತಿಭಟನೆ ನಡೆಸಿ ಪೊಲೀಸರಿಗೆ ಬೆದರಿಕೆ ಹಾಕಿದ ಬೆಳ್ತಂಗಡಿ ಶಾಸಕರ ಪಟಾಲಂ ವಿರುದ್ದ ಪ್ರಕರಣ ದಾಖಲು Rating: 5 Reviewed By: karavali Times
Scroll to Top