ಕುಮ್ಡೇಲು : ಪಿಕಪ್ ಡಿಕ್ಕಿ ಹೊಡೆದು ಸ್ಕೂಟರ್ ಸಹಸವಾರ ಆಸ್ಪತ್ರೆಗೆ - Karavali Times ಕುಮ್ಡೇಲು : ಪಿಕಪ್ ಡಿಕ್ಕಿ ಹೊಡೆದು ಸ್ಕೂಟರ್ ಸಹಸವಾರ ಆಸ್ಪತ್ರೆಗೆ - Karavali Times

728x90

5 June 2024

ಕುಮ್ಡೇಲು : ಪಿಕಪ್ ಡಿಕ್ಕಿ ಹೊಡೆದು ಸ್ಕೂಟರ್ ಸಹಸವಾರ ಆಸ್ಪತ್ರೆಗೆ

ಬಂಟ್ವಾಳ, ಜೂನ್ 05, 2024 (ಕರಾವಳಿ ಟೈಮ್ಸ್) : ಪಿಕಪ್ ಡಿಕ್ಕಿ ಹೊಡೆದು ಸ್ಕೂಟರ್ ಸಹಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಪುದು ಗ್ರಾಮದ ಕುಮ್ಡೇಲು ಎಂಬಲ್ಲಿ ಸಂಭವಿಸಿದೆ. 

ಗಾಯಗೊಂಡ ಸ್ಕೂಟರ್ ಸಹಸವಾರನನ್ನು ಹರ್ಷ ಎಂದು ಹೆಸರಿಸಲಾಗಿದೆ. ರಾಮಲ್ ಕಟ್ಟೆ ನಿವಾಸಿ ಸಂತೋಷ್ ಕುಮಾರ್ ಅವರು ಚಲಾಯಿಸುತ್ತಿದ್ದ ಸ್ಕೂಟರಿನಲ್ಲಿ ಹಿಂಬದಿ ಸವಾರನಾಗಿ ಹರ್ಷ ಅವರು ಸಂಚರಿಸುತ್ತಿದ್ದ ವೇಳೆ ಕುಮ್ಡೇಲು ಎಂಬಲ್ಲಿ ಪಿಕಪ್ ವಾಹನ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಅಪಘಾತದಿಂದ ಸ್ಕೂಟರ್ ಸಮೇತ ಸವಾರರಿಬ್ಬರು ರಸ್ತೆಗೆ ಬಿದ್ದಿದ್ದು, ಸಹಸವಾರ ಹರ್ಷ ಅವರು ಗಾಯಗೊಂಡಿದ್ದಾರೆ. ಸವಾರ ಸಂತೋಷ್ ಅವರು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ. ಗಾಯಾಳು ಹರ್ಷ ಅವರನ್ನು ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಸ್ಕೂಟರ್ ಸವಾರ ಸಂತೋಷ್ ಕುಮಾರ್ ನೀಡಿದ ದೂರಿನಂತೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕಣ ದಾಖಲಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಕುಮ್ಡೇಲು : ಪಿಕಪ್ ಡಿಕ್ಕಿ ಹೊಡೆದು ಸ್ಕೂಟರ್ ಸಹಸವಾರ ಆಸ್ಪತ್ರೆಗೆ Rating: 5 Reviewed By: karavali Times
Scroll to Top