ಕಟ್ಟಡ ಹಾಗೂ ಇತರ ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಎಐಸಿಸಿಟಿಯು ಮನವಿ - Karavali Times ಕಟ್ಟಡ ಹಾಗೂ ಇತರ ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಎಐಸಿಸಿಟಿಯು ಮನವಿ - Karavali Times

728x90

28 June 2024

ಕಟ್ಟಡ ಹಾಗೂ ಇತರ ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಎಐಸಿಸಿಟಿಯು ಮನವಿ

ಬಂಟ್ವಾಳ, ಜೂನ್ 28, 2024 (ಕರಾವಳಿ ಟೈಮ್ಸ್) : ಕಟ್ಟಡ  ಮತ್ತು ಇತರೇ ನಿರ್ಮಾಣ ಕಾರ್ಮಿಕ ಮಂಡಳಿಯ ಹೊಸ ತಂತ್ರಾಂಶದ ದೋಷ ಸರಿಪಡಿಸುವ ಬಗ್ಗೆ, ಶೈಕ್ಷಣಿಕ ಧನಸಹಾಯ ಹಾಗೂ ಕಟ್ಟಡ ಕಾರ್ಮಿಕರ ಹಲವಾರು ಸೌಲಭ್ಯಗಳ ಸಹಿತ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಪ್ರಗತಿಪರ ದಕ್ಷಿಣ ಕನ್ನಡ ಜಿಲ್ಲಾ ಕಟ್ಟಡ ಮತ್ತು ಇತರೇ ನಿರ್ಮಾಣ ಕಾರ್ಮಿಕರÀ ಸಂಘ (ರಿ) ಎಐಸಿಸಿಟಿಯು ವತಿಯಿಂದ ಕಾರ್ಮಿಕ ನಿರೀಕ್ಷಕರ ಮೂಲಕ ಕಲ್ಯಾಣ ಮಂಡಳಿ ಕಾರ್ಯನಿರ್ವಹಣಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. 

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಮಂಡಳಿಯ ವಿವಿಧ ಸೌಲಭ್ಯಗಳಿಗೆ ಅನ್‍ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಹೊಸತಾದ ತಂತ್ರಾಂಶದಲ್ಲಿ ಹಲವಾರು ದೋಷಗಳಿದ್ದು, ಕಾರ್ಮಿಕರಿಗೆ ಸರಿಯಾದ ಸಮಯಕ್ಕೆ ನವೀಕರಣ ಮಾಡಲು ಆಗುತ್ತಿಲ್ಲ. ಇದರಿಂದ ಕಾರ್ಮಿಕ ವಿವಿಧ ಸೌಲಭ್ಯಗಳಿಗೆ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತಿಲ್ಲ. ಇದರಿಂದ ಕಾರ್ಮಿಕರಿಗೆ ತುಂಬಾ ತೊಂದರೆಯಾಗುತ್ತಿದೆ. ತಂತ್ರಾಂಶದಲ್ಲಿರುವ ತಾಂತ್ರಿಕ ದೋಷವನ್ನು ಶೀಘ್ರ ಸರಿಪಡಿಸಬೇಕು, ಕಟ್ಟಡ ಕಾರ್ಮಿಕರು ಮಂಡಳಿಗೆ ನೋಂದಣಿಯಾಗುವ ಸಂದರ್ಭದಲ್ಲಿ ವೈದ್ಯರ ಮುಖಾಂತರ ವಯಸ್ಸಿನ ದಾಖಲೆಯನ್ನು ನೀಡಿ ಕಾರ್ಮಿಕರ ಗುರುತಿನ ಚೀಟಿ ಪಡೆದುಕೊಂಡಿರುತ್ತಾರೆ. ಆದರೆ ಈಗ ಪಿಂಚಣಿಗೆ ಅರ್ಜಿ ಸಲ್ಲಿಸುವಾಗ ಆಧಾರ್ ಕಾರ್ಡಿನಲ್ಲಿರುವ ವಯಸ್ಸು ಹಾಗೂ ಮೂಲ ಗುರುತಿನ ಚೀಟಿಯಲ್ಲಿ ಜನನ ದಿನಾಂಕ ವ್ಯತ್ಯಾಸ ಇರುವುದರಿಂದ ಪಿಂಚಣಿಗೆ ಅರ್ಜಿ ಸಲ್ಲಿಸಲು ಮೂಲ ಗುರುತಿನ ಚೀಟಿಯನ್ನು ಪರಿಗಣಿಸಿ ಪಿಂಚಣಿ ನೀಡಬೇಕು, ಶೈಕ್ಷಣಿಕ ಧನ ಸಹಾಯಕ್ಕೆ ಈ ಮೊದಲು ಹಾಕಿದ ಅರ್ಜಿಯನ್ನು ವಿಲೇವಾರಿ ಮಾಡಿದ ಬಳಿಕ ಪ್ರಸ್ತುತ ಶೈಕ್ಷಣಿಕ ವರ್ಷದ ಅರ್ಜಿ ಆಹ್ವಾನಿಸಬೇಕು ಹಾಗೂ ಹಳೇ ಮಾದರಿಯಲ್ಲಿ ಶೈಕ್ಷಣಿಕ ಧನ ಸಹಾಯ ನೀಡಬೇಕು, ಎಲ್ಲಾ ಕಾರ್ಮಿಕ ಇಲಾಖಾ ಕಚೇರಿಗಳಲ್ಲಿ ಖಾಯಂ ಕಾರ್ಮಿಕ ನಿರೀಕ್ಷಕರು ಹಾಗೂ ಸಿಬ್ಬಂದಿ ನಿಯೋಜಿಸಬೇಕು, ಕಟ್ಟಡ ಕಾರ್ಮಿಕರು ಸಲ್ಲಿಸಿದ ವಿವಿಧ ಸೌಲಭ್ಯಗಳ ಅರ್ಜಿಯನ್ನು ಪರಿಶೀಲಿಸಿ ಶೀಘ್ರ ವಿಲೇವಾರಿ ಮಾಡಬೇಕು, ಮಂಡಳಿಯಿಂದ ಕಾರ್ಮಿಕರಿಗೆ ಕಿಟ್ ಹಾಗೂ ಆರೋಗ್ಯ ತಪಾಸಣೆಯ ಹೆಸರಿನಲ್ಲಿ ನಡೆಯುವ ಭ್ರಷ್ಟಾಚಾರ ನಿಲ್ಲಿಸಿ ಎಲ್ಲಾ ಸೌಲಭ್ಯಗಳನ್ನು ಕಾರ್ಮಿಕರಿಗೆ ನೇರವಾಗಿ ಒದಗಿಸಬೇಕು, ಎಲ್ಲಾ ಜಿಲ್ಲಾ ಕಾರ್ಮಿಕ ಇಲಾಖಾ ಕೇಂದ್ರಗಳಲ್ಲಿ ಕಟ್ಟಡ ಕಾರ್ಮಿಕರ ಕುಂದು ಕೊರತೆಗಳ ಬಗ್ಗೆ ಪ್ರತೀ ತಿಂಗಳು ಅದಾಲತ್ ನಡೆಸಬೇಕು ಇತ್ಯಾದಿ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಈ ಮನವಿ ಸಲ್ಲಿಸಲಾಯಿತು. 

ನಿಯೋಗದಲ್ಲಿ ಎಐಸಿಸಿಟಿಯು ಜಿಲ್ಲಾಧ್ಯಕ್ಷ ರಾಮಣ್ಣ ವಿಟ್ಲ, ಜಿಲ್ಲಾ ಕಾರ್ಯದರ್ಶಿ ಮೋಹನ್ ಕೆ ಇ, ಪ್ರಮುಖರಾದ ಅಚ್ಯುತ ಕಟ್ಟೆ, ರಾಜೀವ ಅಳಿಕೆ ಮೊದಲಾದವರಿದ್ದರು. 

  • Blogger Comments
  • Facebook Comments

0 comments:

Post a Comment

Item Reviewed: ಕಟ್ಟಡ ಹಾಗೂ ಇತರ ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಎಐಸಿಸಿಟಿಯು ಮನವಿ Rating: 5 Reviewed By: karavali Times
Scroll to Top