ಬೆಂಗಳೂರು, ಜುಲೈ 08, 2024 (ಕರಾವಳಿ ಟೈಮ್ಸ್) : ಉಳ್ಳಾಲ ಖಾಝಿ ಸಯ್ಯಿದ್ ಕೂರತ್ ತಂಙಳ್ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮ್ಯ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.
ಮುಸ್ಲಿಂ ಸಮುದಾಯದ ಆಧ್ಯಾತ್ಮಿಕ ನಾಯಕರು, ಹಿರಿಯರು ಆದ ಸೈಯ್ಯದ್ ಕೂರತ್ ತಂಙಳ್ ಅವರ ನಿಧನದ ಸುದ್ದಿ ನೋವುಂಟುಮಾಡಿದೆ. ಸದಾ ಕಾಲ ಸಮಾಜದ ಹಿತವನ್ನು ಬಯಸುತ್ತಿದ್ದ, ಕೋಮು ಸಾಮರಸ್ಯಕ್ಕಾಗಿ ದುಡಿದ ಹಿರಿಯ ಚೇತನದ ಅಗಲಿಕೆ ಮುಸ್ಲಿಂ ಸಮುದಾಯಕ್ಕೆ ಮಾತ್ರವಲ್ಲ, ಇಡೀ ನಾಡಿಗೆ ತುಂಬಲಾರದ ನಷ್ಟ.
ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಸೈಯ್ಯದ್ ಕೂರತ್ ತಂಙಳ್ ಅವರ ಕುಟುಂಬ ವರ್ಗ ಮತ್ತು ಅನುಯಾಯಿಗಳಿಗೆ ನನ್ನ ಸಂತಾಪಗಳು ಎಂದವರು ತಮ್ಮ ಸಂತಾಪ ಸೂಚಕ ಹೇಳಿಕೆಯಲ್ಲಿ ತಿಳಿಸಿದ್ದಾರೆ.
 
 







 
 
 
 


 



 




0 comments:
Post a Comment