ಕಡಬ, ಆಗಸ್ಟ್ 12, 2024 (ಕರಾವಳಿ ಟೈಮ್ಸ್) : ಸ್ಕೂಟರ್ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಪಾದಚಾರಿ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಕೋಡಿಂಬಾಳ ಗ್ರಾಮದ ಸಪ್ತಗಿರಿ ಶಾಮಿಯಾನ ಅಂಗಡಿ ಬಳಿ ಸಂಭವಿಸಿದೆ.
ಮೃತ ವ್ಯಕ್ತಿಯನ್ನು ಹುಕ್ರ (75) ಎಂದು ಹೆಸರಿಸಲಾಗಿದೆ. ಇವರು ಆಗಸ್ಟ್ 10 ರಂದು ಬೆಳಿಗ್ಗೆ ರಸ್ತೆ ಬದಿಯಲ್ಲಿ ರಸ್ತೆ ದಾಟಲು ನಿಂತಿದ್ದ ವೇಳೆ ಮುಹಮ್ಮದ್ ನೌಫಲ್ ಎಂಬವರು ಚಲಾಯಿಸಿಕೊಂಡು ಬಂದ ಸ್ಕೂಟರ್ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಅಪಘಾತದಿಂದ ಗಂಭೀರ ಗಾಯಗೊಂಡ ಹುಕ್ರ ಅವರನ್ನು ಸ್ಥಳೀಯರು ಕಡಬ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಗಸ್ಟ್ 11 ರಂದು ಮೃತಪಟ್ಟಿದ್ದಾರೆ. ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment