ಮಂಗಳೂರು/ ಪುತ್ತೂರು, ಆಗಸ್ಟ್ 19, 2024 (ಕರಾವಳಿ ಟೈಮ್ಸ್) : ಭಾರತೀಯ ಅಂಚೆ ಇಲಾಖೆಯು 6ನೇ ತರಗತಿಯಿಂದ 9ನೇ ತರಗತಿಗಳಲ್ಲಿ ಓದುತ್ತಿರುವ ಶಾಲಾ ವಿದ್ಯಾರ್ಥಿಗಳಲ್ಲಿ ‘ಫಿಲಾಟೆಲಿ’ (ಅಂಚೆ ಚೀಟಿ ಸಂಗ್ರಹಣೆ) ಬಗ್ಗೆ ಆಸಕ್ತಿ ಮೂಡಿಸುವ ಸಲುವಾಗಿ ಘೋಷಿಸಲಾದ “ದೀನ್ ದಯಾಲ್ ಸ್ಪರ್ಶ್ ಯೋಜನೆ” ಸ್ಕಾಲರ್ ಶಿಪ್ ಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಸೆಪ್ಟೆಂಬರ್ 3 ರೊಳಗೆ ಹಿರಿಯ ಅಂಚೆ ಅಧೀಕ್ಷಕರು, ಪುತ್ತೂರು ವಿಭಾಗ, ಪುತ್ತೂರು-574 201 ಹಾಗೂ ಹಿರಿಯ ಅಂಚೆ ಅಧೀಕ್ಷಕರು, ಮಂಗಳೂರು ವಿಭಾಗ, ಮಂಗಳೂರು -575002 ಇವರಿಗೆ ತ್ವರಿತ ಅಂಚೆ (ಸ್ಪೀಡ್ ಪೆÇೀಸ್ಟ್ ) ಅಥವಾ ನೋಂದಾಯಿತ ಅಂಚೆ ಮೂಲಕ ತಲುಪುವಂತೆ ಅರ್ಜಿ ಸಲ್ಲಿಸತಕ್ಕದ್ದು. ಕಳೆದ ಬಾರಿಯ ವಾರ್ಷಿಕ ಪರೀಕ್ಷೆಯಲ್ಲಿ 60% ಗಿಂತ ಅಧಿಕ ಅಂಕಗಳನ್ನು (2023-24) ಗಳಿಸಿದ್ದು ಫಿಲಾಟೆಲಿ ಖಾತೆ ಅಥವಾ ಶಾಲಾ ಫಿಲಾಟೆಲಿ ಕ್ಲಬ್ ಸದಸ್ಯರಾಗಿರೋ ವಿದ್ಯಾರ್ಥಿಗಳು ಅರ್ಹರಾಗಿರುತ್ತಾರೆ. ಹೆಚ್ಚಿನ ವಿವರಗಳಿಗಾಗಿ www.karnatakapost.gov.in ವೆಬ್ ಸೈಟಿಗೆ ಅಥವಾ ಹತ್ತಿರದ ಅಂಚೆ ಕಚೇರಿಗೆ ಭೇಟಿ ನೀಡುವಂತೆ ಮಂಗಳೂರು ಹಾಗೂ ಪುತ್ತೂರು ಅಂಚೆ ಅಂಚೆ ಅಧೀಕ್ಷಕರ ಕಛೇರಿ ಪ್ರಕಟಣೆ ತಿಳಿಸಿದೆ.
19 August 2024
- Blogger Comments
- Facebook Comments
Subscribe to:
Post Comments (Atom)
0 comments:
Post a Comment