ಬೆಳ್ತಂಗಡಿ, ಸೆಪ್ಟೆಂಬರ್ 27, 2024 (ಕರಾವಳಿ ಟೈಮ್ಸ್) : ಅಡಿಕೆ ತೋಟದಲ್ಲಿ ಅಕ್ರಮವಾಗಿ ಜಾನುವಾರು ವಧೆ ಮಾಡುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿರುವ ಧರ್ಮಸ್ಥಳ ಪೊಲೀಸರು ಮಾಂಸ ಸಹಿತ ಇತರ ಸೊತ್ತುಗಳನ್ನು ವಶಪಡಿಸಿಕೊಂಡ ಘಟನೆ ಗುರುವಾರ ಮಧ್ಯಾಹ್ನ ವೇಳೆಗೆ ನಡೆದಿದೆ. ಆರೋಪಿಗಳು ಪರಾರಿಯಾಗಿದ್ದಾರೆ.
ಕೊಕ್ಕಡ ಗ್ರಾಮದ ಮಲ್ಲಿಗೆ ಮಜಲು ನಿವಾಸಿ ಉಸ್ಮಾನ್ ಎಂಬವರ ಅಡಿಕೆ ತೋಟದಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಜಾನುವಾರನ್ನು ಕಡಿದು ಮಾಂಸ ಮಾಡುವ ಬಗ್ಗೆ ಖಚಿತ ಮಾಹಿತಿ ಬಂದ ಮೇರೆಗೆ ಧರ್ಮಸ್ಥಳ ಠಾಣಾ ಪಿಎಸ್ಸೈ ಕಿಶೋರ್ ಪಿ ಅವರ ನೇತೃತ್ವದ ಪೊಲೀಸರು ಈ ದಾಳಿ ಸಂಘಟಿಸಿದ್ದಾರೆ. ದಾಳಿ ವೇಳೆ ಆರೋಪಿ ಓಡಿ ಪರಾರಿಯಾಗಿದ್ದು, ಘಟನಾ ಸ್ಥಳದಲ್ಲಿ ಸುಮಾರು 10 ಕೆಜಿ ಜಾನುವಾರು ಮಾಂಸ ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಪೊಲೀಸರು ವಶಪಡಿಸಿಕೊಂಡ ವಸ್ತುಗಳ ಮೌಲ್ಯ 5,250/- ರೂಪಾಯಿ ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಆರೋಪಿಗಳಾದ ಉಸ್ಮಾನ್ ಮತ್ತು ಸಲೀಂ ಎಂಬವರ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 66/2024, ಕಲಂ 4, 12 ಕರ್ನಾಟಕ ಗೋಹತ್ಯೆ ನಿಷೇದ ಕಾಯಿದೆ ಮತ್ತು ಜಾನುವಾರು ಸಂರಕ್ಷಣಾ ಕಾಯಿದೆ-2020 ರಂತೆ ಪ್ರಕರಣ ದಾಖಲಾಗಿದೆ.
0 comments:
Post a Comment