ಬಂಟ್ವಾಳ, ಸೆಪ್ಟೆಂಬರ್ 18, 2024 (ಕರಾವಳಿ ಟೈಮ್ಸ್) : ಮನೆ ಮಂದಿ ಮಸೀದಿಯಲ್ಲಿ ರಾತ್ರಿ ವೇಳೆ ನಡೆಯುತ್ತಿದ್ದ ಈದ್ ಮಿಲಾದ್ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಕಿಟಕಿ ಸರಳು ಮುರಿದು ಒಳನುಗ್ಗಿದ ಕಳ್ಳರು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಹಾಗೂ ಸಾವಿರಾರು ರೂಪಾಯಿ ನಗದು ಹಣ ಕಳವುಗೈದ ಘಟನೆ ಮಂಚಿ ಗ್ರಾಮದ ಮೋಂತಿಮಾರು ಎಂಬಲ್ಲಿ ಸೋಮವಾರ ರಾತ್ರಿ ನಡೆದಿದೆ.
ಇಲ್ಲಿನ ನಿವಾಸಿ ಆಸ್ಮ (47) ಎಂಬವರ ಮನೆಯಲ್ಲಿ ಈ ಕಳವು ಕೃತ್ಯ ನಡೆದಿದೆ. ಇವರು ಸೋಮವಾರ ರಾತ್ರಿ ಸುಮಾರು 9 ಗಂಟೆಗೆ ಮನೆಗೆ ಬೀಗ ಹಾಕಿ ಮಕ್ಕಳೊಂದಿಗೆ ಮಸೀದಿಯಲ್ಲಿ ನಡೆಯುತ್ತಿದ್ದ ಈದ್ ಮಿಲಾದ್ ಕಾರ್ಯಕ್ರಮಕ್ಕೆ ತೆರಳಿದ್ದರು. ರಾತ್ರಿ ಸುಮಾರು 12.45 ಗಂಟೆಗೆ ವಾಪಾಸು ಬಂದು ನೋಡಿದಾಗ, ಯಾರೋ ಕಳ್ಳರು ಮನೆಯ ಹಿಂಬದಿಯ ಕಿಟಕಿಯ 2 ಸರಳುಗಳನ್ನು ಯಾವುದೋ ಆಯುಧದಿಂದ ತುಂಡು ಮಾಡಿ ಒಳಗೆ ಪ್ರವೇಶಿಸಿ, ಗಾದ್ರೇಜ್ ಕಪಾಟಿನಲ್ಲಿದ್ದ 2 ಪವನ್ ಹಾಗೂ 2 ಗ್ರಾಂ ಚಿನ್ನಾಭರಣಗಳು ಮತ್ತು 25 ಸಾವಿರ ರೂಪಾಯಿ ನಗದು ಹಣವನ್ನು ಕಳವುಗೈದಿದ್ದಾರೆ. ಕಳವಾದ ಸೊತ್ತುಗಳ ಒಟ್ಟು ಮೌಲ್ಯ 1.33 ಲಕ್ಷ ರೂಪಾಯಿಗಳು ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಅಸ್ಮ ಅವರು ನೀಡಿದ ದೂರಿನಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment