ವಿಟ್ಲಪಡ್ನೂರು : ಹಾಡಹಗಲೇ ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು - Karavali Times ವಿಟ್ಲಪಡ್ನೂರು : ಹಾಡಹಗಲೇ ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು - Karavali Times

728x90

17 September 2024

ವಿಟ್ಲಪಡ್ನೂರು : ಹಾಡಹಗಲೇ ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು

ಬಂಟ್ವಾಳ, ಸೆಪ್ಟೆಂಬರ್ 18, 2024 (ಕರಾವಳಿ ಟೈಮ್ಸ್) : ಹಾಡಹಗಲೇ ಮನೆಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವುಗೈದ ಘಟನೆ ವಿಟ್ಲಪಡ್ನೂರು ಗ್ರಾಮದ ಕುಂಟುಕುಡೆಲು ಎಂಬಲ್ಲಿ ಮಂಗಳವಾರ ಮಧ್ಯಾಹ್ನ ಬೆಳಕಿಗೆ ಬಂದಿದೆ. 

ಇಲ್ಲಿನ ನಿವಾಸಿ ಲೀಲಾ ಕೆ (55) ಎಂಬವರ ಮನೆಯಲ್ಲಿ ಈ ಕಳವು ಕೃತ್ಯ ನಡೆದಿದೆ. ಇವರು ಸೋಮವಾರ ಬೆಳಿಗ್ಗೆ ಮನೆಗೆ ಬೀಗ ಹಾಕಿ ಮಗಳೊಂದಿಗೆ ಕೊಡಂಗಾಯಿ ಎಂಬಲ್ಲಿಗೆ ತೆರಳಿದ್ದರು. ಮಧ್ಯಾಹ್ನದ ವೇಳೆಗೆ ಮನೆಗೆ ಹಿಂತಿರುಗಿದಾಗ ಈ ಕಳವು ಕೃತ್ಯ ಬೆಳಕಿಗೆ ಬಂದಿದೆ. 

ಮನೆಯ ಹಿಂಭಾಗದ ಬಾಗಿಲನ್ನು ಮುರಿದು ಒಳಪ್ರವೇಶಿಸಿರುವ ಕಳ್ಳರು ಕೋಣೆಯೊಂದರ ಕಪಾಟಿನ ಒಳಗಿರಿಸಿದ್ದ, ಒಟ್ಟು 36 ಗ್ರಾಂ ತೂಕದ ಚಿನ್ನಾಭರಣಗಳನ್ನು ಕಳ್ಳತನ ಮಾಡಲಾಗಿದೆ. ಕಳವಾದ ಚಿನ್ನಾಭರಣಗಳ ಒಟ್ಟು ಮೌಲ್ಯ 1.46 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: ವಿಟ್ಲಪಡ್ನೂರು : ಹಾಡಹಗಲೇ ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು Rating: 5 Reviewed By: karavali Times
Scroll to Top