ಬಂಟ್ವಾಳ, ಸೆಪ್ಟೆಂಬರ್ 15, 2024 (ಕರಾವಳಿ ಟೈಮ್ಸ್) : ರಾಜ್ಯ ಸರಕಾರದ ನಿರ್ದೇಶನದನ್ವಯ ಬಂಟ್ವಾಳ ತಾಲೂಕಿನಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಭಾನುವಾರ (ಸೆಪ್ಟೆಂಬರ್ 15) ಫರಂಗಿಪೇಟೆಯಿಂದ ಮಿತ್ತೂರು-ಕಬಕದವರೆಗೆ ಮಾನವ ಸರಪಳಿ ಕಾರ್ಯಕ್ರಮ ಆಯೋಜಿಸಲಾಯಿತು.
ಬಿ ಸಿ ರೋಡಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಂಟ್ವಾಳ ತಾಲೂಕು ತಹಶೀಲ್ದಾರ್ ಅರ್ಚನಾ ಭಟ್, ಮಾಜಿ ಸಚಿವ ಬಿ ರಮಾನಾಥ ರೈ, ಪುರಸಭಾಧ್ಯಕ್ಷ ಬಿ ವಾಸು ಪೂಜಾರಿ ಲೊರೆಟ್ಟೊ, ಬುಡಾ ಅಧ್ಯಕ್ಷ ಬೇಬಿ ಕುಂದರ್, ಕೆಪಿಸಿಸಿ ಪದಾಧಿಕಾರಿಗಳಾದ ಪಿಯೂಸ್ ಎಲ್ ರೋಡ್ರಿಗಸ್, ಜಿ ಎ ಬಾವಾ, ಎಸ್ಕೆಎಸ್ಸೆಸ್ಸೆಫ್ ಮುಖಂಡ ಅಬೂಸ್ವಾಲಿಹ್ ಫೈಝಿ ಅಕ್ಕರಂಗಡಿ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ ಭಂಡಾರಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಾಲಕೃಷ್ಣ ಅಂಚನ್, ಪಂಚಾಯತ್ ಅಧ್ಯಕ್ಷ ಅನ್ವರ್ ಕರೋಪಾಡಿ, ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹಿಂ ನವಾಝ್ ಹಾಗೂ ವಿವಿಧ ರಾಜಕೀಯ ಮುಖಂಡರು, ಸಾಮಾಜಿಕ ಸಂಘಟನೆಗಳ ಮುಖ್ಯಸ್ಥರು, ವಿವಿಧ ಇಲಾಖಾಧಿಕಾರಿಗಳು, ವಿವಿಧ ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು, ಭಾಗವಹಿಸಿದ್ದರು.
ಮಾನವ ಸರಪಳಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಾರ್ವಜನಿಕರು ಬೆಳಿಗ್ಗೆ 9 ಗಂಟೆಗೆ ನಿಗದಿತ ಸ್ಥಳದಲ್ಲಿ ಬಂದು ಸೇರಿದ್ದು, 9.30ಕ್ಕೆ ಸರತಿ ಸಾಲಿನಲ್ಲಿ ನಿಂತು, 9.37 ರಿಂದ ನಾಡಗೀತೆ ಹಾಡುವ ಕಾರ್ಯಕ್ರಮದ ಬಳಿಕ 9.55 ರಿಂದ ಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮ ನಡೆಯಿತು. ಪುರಸಭಾಧ್ಯಕ್ಷ ವಾಸು ಪೂಜಾರಿ, ಬುಡಾ ಅಧ್ಯಕ್ಷ ಬೇಬಿ ಕುಂದರ್ ಹಾಗೂ ಮಾಜಿ ಸಚಿವ ಬಿ ರಮಾನಾಥ ರೈ ಅವರು ಪ್ರಜಾಪ್ರಭುತ್ವದ ಮಹತ್ವದ ಬಗ್ಗೆ ಸಂದೇಶ ನೀಡಿದರು.
0 comments:
Post a Comment