ಬೆಂಗಳೂರು, ಸೆಪ್ಟೆಂಬರ್ 11, 2024 (ಕರಾವಳಿ ಟೈಮ್ಸ್) : ಇತ್ತೀಚೆಗೆ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಚಿತ್ರದುರ್ಗದ ಬಿ.ಜೆ.ಪಿ ಸಂಸದ ಗೋವಿಂದ ಕಾರಜೋಳ ಮಾತನಾಡುತ್ತಾ ಶಿಕ್ಷಕರು ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಚಗೊಳಿಸುತ್ತಿರುವ ವೀಡಿಯೋಗಳನ್ನು ನಾನು ನೋಡಿದ್ದೇನೆ. ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಪೆÇರಕೆ ನೀಡುವುದು ಅಪರಾಧ ಎಂಬಂತೆ ಕಾಣುತ್ತಿದ್ದು, ಇದರಿಂದ ಸ್ವಚ್ಚತೆಯ ಕೆಲಸ ಕೀಳು ಎಂಬ ಭಾವನೆ ಮೂಡಿದೆ, ಜಪಾನಿನಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಶೌಚಾಲಯ ಸ್ವಚ್ಚಗೊಳಿಸುತ್ತಾರೆ ಎಂಬುದಾಗಿ ಹೇಳಿಕೆ ನೀಡಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ. ಓರ್ವ ಜನಪ್ರತಿನಿಧಿಯಾಗಿರುವ ಗೋವಿಂದ ಕಾರಜೋಳರ ಈ ಕೀಳುಮಟ್ಟದ ಹೇಳಿಕೆಯನ್ನು ಅಖಿಲ ಭಾರತ ವಿದ್ಯಾರ್ಥಿ ಸಂಘಟನೆ ತೀವ್ರವಾಗಿ ಖಂಡಿಸಿದೆ.
ಗುಣಮಟ್ಟದ ಶಿಕ್ಷಣ ಪಡೆಯುವುದು ವಿದ್ಯಾರ್ಥಿಗಳ ಹಕ್ಕಾಗಿದ್ದು, ಇತ್ತೀಚಿನ ದಿನಗಳಲ್ಲಿ ಶಾಲೆಯಿಂದ ಹೊರಗುಳಿಯುತ್ತಿರುವ ಮಕ್ಕಳ ಸಂಖ್ಯೆ ಹೆಚ್ಚಾಗುತ್ತಿದೆ. ಸರಕಾರಿ ಶಾಲೆಗಳು ಮುಚ್ಚಲ್ಪಡುತ್ತಿದೆ. ಇದರಿಂದಾಗ ದಲಿತ, ಬಡ ವರ್ಗದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಇಂತಹ ಸಂಧರ್ಭದಲ್ಲಿ ಜವಬ್ದಾರಿಯುತ ಜನಪ್ರತಿನಿಧಿಗಳು ಮಕ್ಕಳು ಉತ್ತಮ ಶಿಕ್ಷಣ ಪಡೆಯಲು ಬೇಕಾಗುವ ಕ್ರಮಗಳ ಬಗ್ಗೆ ಮಾತನಾಡುವ ಬದಲು ಶೌಚಾಲಯ ಸ್ವಚ್ಚ ಮಾಡಲು ವಿದ್ಯಾರ್ಥಿಗಳನ್ನು ತೊಡಗಿಸುವಂತೆ ಹೇಳಿಕೆ ನೀಡುವುದರಿಂದ ದಲಿತ ಬಡ ವಿದ್ಯಾರ್ಥಿಗಳೇ ಇದರಿಂದ ತೊಂದರೆಗೆ ಒಳಾಗಾಗಿ ಶಿಕ್ಷಣದಿಂದ ವಂಚಿತರಾಗಬೇಕಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿರುವ ವಿದ್ಯಾರ್ಥಿ ಸಂಘಟನೆ ಮಕ್ಕಳಿಂದ ಶೌಚಾಲಯ ಸ್ವಚ್ಚಗೊಳಿಸುವುದನ್ನು ಈಗಾಗಲೇ ನಿಷೇಧಿಸಿ ಆದೇಶ ಮಾಡಲಾಗಿದೆ, ಹಾಗೂ ಮಕ್ಕಳನ್ನು ಇಂತಹ ಕೆಲಸಗಳಲ್ಲಿ ತೊಡಗಿಸುವುದು ಮಕ್ಕಳ ಹಕ್ಕುಗಳ ಉಲ್ಲಂಘನೆ ಹಾಗೂ ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ 2009ರ ಸೆಕ್ಷನ್ 17ರ ಉಲ್ಲಂಘನೆಯಾಗುತ್ತದೆ ಎಂದಿದೆ.
ಗೋವಿಂದ ಕಾರಜೋಳರ ಈ ಹೇಳಿಕೆ ಅವರು ಮತ್ತು ಅವರ ಪಕ್ಷ ಯಾವ ಸಿದ್ದಾಂತವನ್ನು ಪ್ರತಿಪಾದಿಸುತ್ತದೆ ಎಂಬುದನ್ನು ಎತ್ತಿ ತೋರಿಸುತ್ತದೆ. ಕಳೆದ ಬಿ.ಜೆ.ಪಿ ಸರಕಾರದ ಅವಧಿಯಲ್ಲಿ ಎನ್ ಇ ಪಿ (ರಾಷ್ಟ್ರೀಯ ಶಿಕ್ಷಣ ನೀತಿ) ಜಾರಿಗೆ ತಂದಿದ್ದು ಇದರಲ್ಲಿ ಜಾತಿ ಮತ್ತು ವೃತ್ತಿ ಆಧಾರಿತ ಕುಲ ಕಸುಬನ್ನು ಸಮರ್ಥಿಸಲಾಗಿದೆ. ಪೆÇೀಷಕರು ಒಂದು ವೃತ್ತಿಯನ್ನು ಮಾಡುತ್ತಿದ್ದರೆ ಅವರ ಮಕ್ಕಳು ಕೂಡಾ ಅದೇ ವೃತ್ತಿಯನ್ನು ಮಾಡಬೇಕು ಎನ್ನುವ ನೀತಿ ಇದಾಗಿದೆ. ಈ ರೀತಿಯಲ್ಲಿ ಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡುವ ಮೂಲಕ ಮನುವಾದಿ ಆಳ್ವಿಕೆಗೆ ಪೂರಕವಾಗುವ ಹೇಳಿಕೆ ಇದಾಗಿದೆ. ಸಾಂವಿಧಾನಿಕ ವ್ಯವಸ್ಥೆಯ ಅಡಿಯಲ್ಲಿ ಜನಪ್ರತಿನಿಧಿಯಾಗಿ ಆಯ್ಕೆಯಾಗಿರುವ ವ್ಯಕ್ತಿಯು ಇಂತಹ ಹೇಳಿಕೆ ನೀಡಿರುವುದು ಖಂಡನೀಯವಾಗಿದ್ದು, ಕೂಡಲೇ ಸಂಸದ ಗೋವಿಂದ ಕಾರಜೋಳ ಅವರ ವಿರುದ್ದ ಸೂಕ್ತ ಕಾನೂನು ಕ್ರಮಕೈಗೊಳ್ಳುವಂತೆ ಅಖಿಲ ಭಾರತ ವಿದ್ಯಾರ್ಥಿ ಸಂಘಟನೆ (ಎ ಐ ಎಸ್ ಎ) ಕರ್ನಾಟಕ ರಾಜ್ಯ ಸಮಿತಿ ಒತ್ತಾಯಿಸಿದೆ.





















0 comments:
Post a Comment