ಬಂಟ್ವಾಳ, ಸೆಪ್ಟೆಂಬರ್ 24, 2024 (ಕರಾವಳಿ ಟೈಮ್ಸ್) : ಬೈಕಿಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು ಮತ್ತಿಬ್ಬರು ಗಾಯಗೊಂಡ ಘಟನೆ ಪುದು ಗ್ರಾಮದ ಮಾರಿಪಳ್ಳ ಜಂಕ್ಷನ್ನಿನಲ್ಲಿ ಮಂಗಳವಾರ ಮುಂಜಾನೆ ವೇಳೆ ಸಂಭವಿಸಿದೆ.
ಮೃತನನ್ನು ಸೇವಂತ್ (21) ಎಂದು ಹೆಸರಿಸಲಾಗಿದ್ದು, ಗಾಯಾಳುಗಳನ್ನು ಪುತ್ತೂರು ತಾಲೂಕು, ಕೆಯ್ಯೂರು ಗ್ರಾಮದ ಮಾಡಾವು ನಿವಾಸಿ ಯತೀನ್ ಕುಮಾರ್ ಸಿ (21) ಹಾಗೂ ಚೇತನ್ ಟಿ ಕೆ (21) ಎಂದು ಗುರುತಿಸಲಾಗಿದೆ.
ಇವರು ಮೂರು ಮಂದಿ ಬೈಕಿನಲ್ಲಿ ವಳಚ್ಚಿಲ್ ಕಡೆಯಿಂದ ಪುತ್ತೂರಿಗೆ ತೆರಳುತ್ತಿದ್ದಾಗ, ಪುದು ಗ್ರಾಮದ ಮಾರಿಪಳ್ಳ ಜಂಕ್ಷನ್ ಬಳಿ ತಲುಪುತ್ತಿದ್ದಂತೆ, ರಸ್ತೆ ಬದಿಯಲ್ಲಿ ನಿಂತಿದ್ದ ಟಿಪ್ಪರ್ ಲಾರಿಯನ್ನು ಅದರ ಚಾಲಕನ ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಏಕಾಏಕಿ ಚಲಾಯಿಸಿದ ಪರಿಣಾಮ ಬೈಕಿಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.
ಅಪಘಾತದ ತೀವ್ರತೆಗೆ ಬೈಕ್ ಸಮೇತ ಮೂವರು ಸವಾರರು ರಸ್ತೆಗೆ ಬಿದ್ದು ಗಾಯಗೊಂಡಿದ್ದಾರೆ. ಗಾಯಾಳುಗಳ ಪೈಕಿ ಗಂಭೀರ ಸ್ಥಿತಿಯಲ್ಲಿದ್ದ ಸೇವಂತ್ ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಯುನಿಟಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅದಾಗಲೇ ಆತ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಬೈಕ್ ಸವಾರ ಚೇತನ್ ಟಿ ಕೆ ಹಾಗೂ ಇನ್ನೋರ್ವ ಸಹಸವಾರ ಯತೀನ್ ಕುಮಾರ್ ಅವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment