ಬಂಟ್ವಾಳ, ಸೆಪ್ಟೆಂಬರ್ 04, 2024 (ಕರಾವಳಿ ಟೈಮ್ಸ್) : ಸ್ಕೂಟರ್ ಸ್ಕಿಡ್ ಆಗಿ ಬಿದ್ದು ಸಹಸವಾರ ಗಾಯಗೊಂಡ ಘಟನೆ ಸಜಿಪಮುನ್ನೂರು ಗ್ರಾಮದ ಮಾರ್ನಬೈಲು ಎಂಬಲ್ಲಿ ಸೋಮವಾರ ರಾತ್ರಿ ಸಂಭವಿಸಿದೆ.
ಗಾಯಗೊಂಡ ಸ್ಕೂಟರ್ ಸಹಸವಾರನನ್ನು ಉಳ್ಳಾಲ ತಾಲೂಕು, ಬೆಳ್ಮ ಗ್ರಾಮದ ನಿತ್ಯಾನಂದ ನಗರ ನಿವಾಸಿ ಅಬ್ಬಾಸ್ ಎಂದು ಹೆಸರಿಸಲಾಗಿದೆ. ಸಾದಿಕ್ ಎಂಬವರು ಚಲಾಯಿಸುತ್ತಿದ್ದ ಸ್ಕೂಟರ್ ಮಾರ್ನಬೈಲು ಎಂಬಲ್ಲಿ ಚಾಲಕನ ನಿಯಂತ್ರಣ ಮೀರಿ ರಸ್ತೆಗೆ ಬಿದ್ದು ಈ ಅಪಘಾತ ಸಂಭವಿಸಿದೆ. ಪರಿಣಾಮ ಸಹಸವಾರ ಅಬ್ಬಾಸ್ ಅವರು ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಯುನಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment