ಪುತ್ತೂರು, ಸೆಪ್ಟೆಂಬರ್ 29, 2024 (ಕರಾವಳಿ ಟೈಮ್ಸ್) : ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 15/2008 ಕಲಂ 416, 420, 511 ಜೊತೆಗೆ 34 ಐಪಿಸಿ ಪ್ರಕರಣದಲ್ಲಿ, ಸುಮಾರು 14 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆಸಾಮಿ ಆಂಧ್ರ ಪ್ರದೇಶ ರಾಜ್ಯದ ಗೋದಾವರಿ ಜಿಲ್ಲೆ ನಿವಾಸಿ ಮಹಮ್ಮದ್ ಇಕ್ಬಾಲ್ ಅಲಿಯಾಸ್ ಪ್ರವೀಣ್ ಕುಮಾರ್ ತೊಮರ್ (53) ಎಂಬಾತನನ್ನು ಪುತ್ತೂರು ಗ್ರಾಮಾಂತರ ಪೊಲೀಸರು ದಸ್ತಗಿರಿ ಮಾಡುವಲ್ಲಿ ಸಫಲರಾಗಿದ್ದಾರೆ.
ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸ್ ಇನ್ಸ್ ಪೆಕ್ಟರ್ ರವಿ ಬಿ ಎಸ್ ಹಾಗೂ ಪಿಎಸ್ಸೈ ಜಂಬೂರಾಜ್ ಮಹಾಜನ್ ಅವರ ಮಾರ್ಗದರ್ಶನದಲ್ಲಿ ಸಿಬ್ಬಂದಿಗಳಾದ ಪರಮೇಶ್ವರ್ ಕೆ, ಮಧು ಕೆ ಎನ್, ಅಸ್ತಮಾ ಅವರುಗಳ ತಂಡ ತೆಲಂಗಾಣ ರಾಜ್ಯದ ಹೈದ್ರಾಬಾದಿನಲ್ಲಿ ಶನಿವಾರ ಕಾರ್ಯಾಚರಣೆ ನಡೆಸಿ ಈ ದಸ್ತಗಿರಿ ನಡೆಸಿದ್ದಾರೆ. ಬಂಧಿತ ಆರೋಪಿಯನ್ನು ಪುತ್ತೂರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
0 comments:
Post a Comment