ಬಂಟ್ವಾಳ, ಸೆಪ್ಟೆಂಬರ್ 15, 2024 (ಕರಾವಳಿ ಟೈಮ್ಸ್) : ತಾಲೂಕಿನ ಬಿ ಸಿ ರೋಡಿನಲ್ಲಿ ಮುಖ್ಯ ಕಚೇರಿ ಹೊಂದಿರುವ ಸವಿತಾ ಸೌಹಾರ್ದ ಸಹಕಾರಿ ನಿಯಮಿತ ಇದರ ಸುರತ್ಕಲ್ ಶಾಖೆ ಹಾಗೂ ಸೌಂದರ್ಯವರ್ಧಕ ಉತ್ಪನ್ನಗಳ ಮಾರಾಟ ಮಳಿಗೆಯ ಉದ್ಘಾಟನಾ ಸಮಾರಂಭ ಸೆಪ್ಟೆಂಬರ್ 17 ರಂದು ಮಂಗಳವಾರ ಬೆಳಿಗ್ಗೆ 10 ಗಂಟೆಗೆ ಇಡ್ಯಾ-ಸುರತ್ಕಲ್ ಅಂಚೆ ಕಚೇರಿ ಎದುರಿನ ಶಂಕರ ಸದನದಲ್ಲಿ ನಡೆಯಲಿದೆ.
ಕರ್ನಾಟಕ ವಿಧಾನಸಭಾಧ್ಯಕ್ಷ ಯು ಟಿ ಖಾದರ್ ಶಾಖೆಯನ್ನು ಉದ್ಘಾಟಿಸಲಿದ್ದು, ಸಂಸದ ಕ್ಯಾ ಬ್ರಿಜೇಶ್ ಚೌಟ ಕಚೇರಿ ಉದ್ಘಾಟಿಸುವರು. ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ ವೈ ಭರತ್ ಶೆಟ್ಟಿ ಮಾರಾಟ ಮಳಿಗೆ ಉದ್ಘಾಟಿಸುವರು. ಮಾಜಿ ಸಚಿವ ಬಿ ರಮಾನಾಥ ರೈ ಅವರು ಶಾಖೆಯ ಭದ್ರತಾ ಕೋಶ ಉದ್ಘಾಟಿಸಲಿದ್ದು, ಸವಿತಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ವಿಶ್ವನಾಥ್ ಸಾಲಿಯಾನ್ ಬಂಟ್ವಾಳ ಅಧ್ಯಕ್ಷತೆ ವಹಿಸುವರು.
ಸಹಕಾರಿ ಸಂಘಗಳ ದ ಕ ಜಿಲ್ಲಾ ಉಪನಿಬಂಧಕ ಎಚ್ ಎನ್ ರಮೇಶ್, ಪುತ್ತೂರು ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಎಸ್ ಆರ್ ಸತೀಶ್ಚಂದ್ರ, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿ ಮೈಸೂರು ಪ್ರಾಂತ ಇದರ ಜಿಲ್ಲಾ ಸಂಯೋಜಕ ವಿಜಯ್ ಬಿ ಎಸ್, ಎಸ್ ಸಿ ಡಿ ಸಿ ಸಿ ಬ್ಯಾಂಕ್ ನಿವೃತ್ತ ಡಿಜಿಎಂ ಉಗ್ಗಪ್ಪ ಶೆಟ್ಟಿ ಕೊಂಬಿಲ, ಸವಿತಾ ಸಮಾಜ ದಕ ಜಿಲ್ಲಾಧ್ಯಕ್ಷ ಆನಂದ ಭಂಡಾರಿ ಹೊಸಬೆಟ್ಟು ಮೊದಲಾದವರು ಅತಿಥಿಗಳಾಗಿ ಭಾಗವಹಿಸುವರು ಎಂದು ಬ್ಯಾಂಕ್ ಅಧ್ಯಕ್ಷ ವಿಶ್ವನಾಥ ಸಾಲಿಯಾನ್ ಬಂಟ್ವಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
0 comments:
Post a Comment