ಬೆಳ್ತಂಗಡಿ, ಸೆಪ್ಟೆಂಬರ್ 22, 2024 (ಕರಾವಳಿ ಟೈಮ್ಸ್) : ಬೆಳ್ತಂಗಡಿ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 172/2014 ಕಲಂ 354(ಬಿ) 323, 324, 504, 506 ಐಪಿಸಿ ಪ್ರಕರಣದಲ್ಲಿ ಆರೋಪಿಯಾಗಿ, ಸುಮಾರು 8 ವರ್ಷಗಳಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ, ವಾರಂಟ್ ಆಸಾಮಿ, ಕೇರಳ ರಾಜ್ಯದ ಕಾಸರಗೋಡು ಜಿಲ್ಲೆ ಹೊಸದುರ್ಗ ತಾಲೂಕು ಚೆಟ್ಟರಿಕಲ್ ನಿವಾಸಿ ಡೆನ್ನಿ ಜೋಸೆಫ್ ಅಲಿಯಾಸ್ ಅಂತೋನಿ ಬಿನ್ ಜೋಸೆಫ್ ಎಂಬಾತನನ್ನು ಬೆಳ್ತಂಗಡಿ ಪೊಲೀಸರು ದಸ್ತಗಿರಿ ಮಾಡುವಲ್ಲಿ ಸಫಲರಾಗಿದ್ದಾರೆ.
ಬೆಳ್ತಂಗಡಿ ಪೊಲೀಸ್ ಇನ್ಸ್ ಪೆಕ್ಟರ್ ಬಿ ಜಿ ಸುಬ್ಬಾಪುರ ಮಠ, ಪಿಎಸ್ಸೈ ಮುರಳೀಧರ್ ಅವರ ನಿರ್ದೇಶನದಂತೆ, ಸಿಬ್ಬಂದಿಗಳಾದ ವೃಷಭ, ಪಳನಿವೇಲು ಹಾಗೂ ಮುನಿಯ ನಾಯ್ಕ ಅವರು ಶನಿವಾರ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
0 comments:
Post a Comment