ಸುಳ್ಯ, ಅಕ್ಟೋಬರ್ 15, 2024 (ಕರಾವಳಿ ಟೈಮ್ಸ್) : ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮದ ಮುಚ್ಚಿಲ ಎಂಬಲ್ಲಿ ಅಕ್ರಮ ಜಾನುವಾರು ಸಾಗಾಟ ಪ್ರಕರಣ ಪತ್ತೆ ಹಚ್ಚಿದ ಬೆಳ್ಳಾರೆ ಪೊಲೀಸರು ವಾಹನ ಸಹಿತ ಜಾನುವಾರುಗಳನ್ನು ವಶಕ್ಕೆ ಪಡೆದುಕೊಂಡ ಘಟನೆ ಸೋಮವಾರ ರಾತ್ರಿ ನಡೆದಿದೆ. ಆರೋಪಿಗಳು ಪರಾರಿಯಾಗಿದ್ದಾರೆ.
ಸೋಮವಾರ ರಾತ್ರಿ ಸುಳ್ಯ ತಾಲೂಕು ಕಲ್ಮಡ್ಕ ಗ್ರಾಮದ ಮುಚ್ಚಿಲ ಎಂಬಲ್ಲಿ ಸ್ವಿಪ್ಟ್ ಕಾರೊಂದರಲ್ಲಿ ಅಕ್ರಮವಾಗಿ ದನಗಳನ್ನು ತುಂಬಿಸಿ ಸಾಗಾಟ ಮಾಡಲು ಪ್ರಯತ್ನಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಬಂದ ಮೇರೆಗೆ ಬೆಳ್ಳಾರೆ ಪೊಲೀಸ್ ಠಾಣಾ ಪಿಎಸ್ಸೈ ಈರಯ್ಯ ಡಿ ಎನ್ ಅವರ ನೇತೃತ್ವದ ಪೊಲೀಸರು ಸ್ಥಳಕ್ಕೆ ತೆರಳಿದಾಗ ರಸ್ತೆ ಬದಿಯಲ್ಲಿ ಕೆಎ-19 ಝಡ್-3350 ನೋಂದಣಿ ಸಂಖ್ಯೆಯ ಬಿಳಿ ಬಣ್ಣದ ಕಾರೊಂದು ನಿಂತಿದ್ದು, ಅದನ್ನು ಪರಿಶೀಲಿಸಿದಾಗ ಕಾರಿನೊಳಗೆ ಹಿಂಸಾತ್ಮಕವಾಗಿ ಮೂರು ದನಗಳನ್ನು ತುಂಬಿಸಿರುವುದು ಕಂಡು ಬಂದಿರುತ್ತದೆ. ಕಾರು ನಿಲ್ಲಿಸಿದ ಸ್ಥಳದಿಂದ ಸ್ವಲ್ಪ ದೂರದಲ್ಲಿರುವ ತೆರೆದ ದನದ ಕೊಟ್ಟಿಗೆಯಲ್ಲಿಯೂ 2 ಜಾನುವಾರುಗಳು ಕಂಡುಬಂದಿದ್ದು, ಸದ್ರಿ ಜಾನುವಾರುಗಳನ್ನು ಮೂರು ಜನರು ಬಿಚ್ಚಲು ಪ್ರಯತ್ನಿಸುತ್ತಿದ್ದವರು ಪೆÇಲೀಸರನ್ನು ಕಂಡು ಓಡಿ ಹೋಗಿರುತ್ತಾರೆ. ಓಡಿ ಪರಾರಿಯಾದ ವ್ಯಕ್ತಿಗಳು ಕೊಟ್ಟಿಗೆಯಲ್ಲಿದ್ದ ದನಗಳನ್ನು ಹಾಗೂ ಕಾರಿನಲ್ಲಿದ್ದ ಜಾನುವಾರುಗಳನ್ನು ಮಾಂಸ ಮಾಡುವ ಉದ್ದೇಶಕ್ಕಾಗಿ ಅಕ್ರಮವಾಗಿ ಸಾಗಾಟ ಮಾಡಲು ಪ್ರಯತ್ನಿಸುತ್ತಿರುವುದು ಕಂಡು ಬಂದ ಮೇರೆಗೆ ಸದ್ರಿ ದನಗಳನ್ನು ಹಾಗೂ ಕಾರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment