ಬಂಟ್ವಾಳ, ನವೆಂಬರ್ 19, 2024 (ಕರಾವಳಿ ಟೈಮ್ಸ್) : ಬಂಟ್ವಾಳ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಇದರ ಸಾಲೆತ್ತೂರು ಶಾಖೆಯನ್ನು ಸಂಘದ ಅಧ್ಯಕ್ಷ ಬಿ ರಮಾನಾಥ ರೈ ಅವರು ಸೋಮವಾರ ಉದ್ಘಾಟಿಸಿದರು. ಗಣಕೀಕರಣವನ್ನು ಮಂಚಿ ಗ್ರಾಮ ಪಂಚಾಯತ್ ಅಧ್ಯಕ್ಷ ಜಿ ಎಂ ಇಬ್ರಾಹಿಂ ಉದ್ಘಾಟಿಸಿದರು. ಭದ್ರತಾ ಕೊಠಡಿಯನ್ನು ಮಿತ್ತನಡ್ಕ ಶ್ರೀ ಮಲರಾಯ ದೈವಸ್ಥಾನದ ಆಡಳಿತ ಮೊಕ್ತೇಸರ ತಿರುಮಲೇಶ್ವರ ಭಟ್ ಉದ್ಘಾಟಿಸಿದರು. ಸಾಲೆತ್ತೂರು ನಿತ್ಯಾಧರ್ ಮಾತೆ ಚರ್ಚ್ ಧರ್ಮಗುರು ರೆ ಫಾ ಅಂಟೋನಿ ಬ್ರಿಟ್ಟೋ ಆಶಿರ್ವಚನಗೈದರು.
ಮುಖ್ಯ ಅತಿಥಿಗಳಾಗಿ ಕೊಳ್ನಾಡು ಗ್ರಾಮ ಪಂಚಾಯತ್ ಅಧ್ಯಕ್ಷ ಅಶ್ರಫ್ ಕೆ ಭಾಗವಹಿಸಿದ್ದರು. ಸಂಘದ ನಿರ್ದೇಶಕರಾದ ಪಿಯೂಸ್ ಎಲ್ ರೋಡ್ರಿಗಸ್, ಬಿ ಎಂ ಅಬ್ಬಾಸ್ ಅಲಿ, ಮಾಯಿಲಪ್ಪ ಸಾಲ್ಯಾನ್, ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಬಿ ಪದ್ಮಶೇಖರ ಜೈನ್ ಮೊದಲಾದವರು ಉಪಸ್ಥಿತರಿದ್ದರು.
0 comments:
Post a Comment