ಬಂಟ್ವಾಳ ತಾಲೂಕಾಡಳಿತ ವತಿಯಿಂದ ಕನಕದಾಸ ಜಯಂತಿ ಆಚರಣೆ - Karavali Times ಬಂಟ್ವಾಳ ತಾಲೂಕಾಡಳಿತ ವತಿಯಿಂದ ಕನಕದಾಸ ಜಯಂತಿ ಆಚರಣೆ - Karavali Times

728x90

18 November 2024

ಬಂಟ್ವಾಳ ತಾಲೂಕಾಡಳಿತ ವತಿಯಿಂದ ಕನಕದಾಸ ಜಯಂತಿ ಆಚರಣೆ

ಬಂಟ್ವಾಳ, ನವೆಂಬರ್ 18, 2024 (ಕರಾವಳಿ ಟೈಮ್ಸ್) : ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬಂಟ್ವಾಳದಲ್ಲಿ ಭಕ್ತ ಕನಕದಾಸ ಜಯಂತಿ ಆಚರಣೆ ಬಿ ಸಿ ರೋಡಿನ ಮಿನಿ ವಿಧಾನಸೌಧ ಸಭಾಂಗಣದಲ್ಲಿ  ಸೋಮವಾರ ನಡೆಯಿತು. 

ಕಾರ್ಯಕ್ರಮ ಉದ್ಘಾಟಿಸಿದ ಉಪತಹಶೀಲ್ದಾರ್ ರಾಜೇಶ್ ನಾಯ್ಕ್ ಮಾತನಾಡಿ, ದಾಸ ಸಾಹಿತ್ಯದ ಮೂಲಕ ಜೀವನ ಪಾಠ ಸಾರಿದ ಕನಕದಾಸರು ಜಾತಿ, ಮತ, ಕುಲಗಳ ಭೇದ ಭಾವವನ್ನು ಮೀರಿಸುವಂತೆ ಸಮಾಜದ ಪಿಡುಗುಗಳ ಬಗ್ಗೆ ಜನಸಾಮಾನ್ಯರಿಗೆ ಅರ್ಥವಾಗುವ ಭಾಷೆಯಲ್ಲಿ ತಿಳಿಸಿ ಸಾಮಾಜಿಕ ಕ್ರಾಂತಿಯನ್ನೇ ಮಾಡಿದ ಕನಕದಾಸರು ಸಂತವರೇಣ್ಯರು ಎಂದರು. 

ಚುನಾವಣೆ ಉಪತಹಸೀಲ್ದಾರ್ ನವೀನ್ ಬೆಂಜನಪದವು ಮಾತಾನಾಡಿ, ಭಗವಂತನನ್ನು ಕೂಡ ತನ್ನಷ್ಟಕ್ಕೆ ಸೆಳೆದ ಶ್ರೇಷ್ಠ ನಮ್ಮ ತುಳುನಾಡಿನ ಉಡುಪಿಯಲ್ಲಿ ಕನಕ ಕಿಂಡಿಯ ಮುಖಾಂತರ ಶ್ರೀ ಕೃಷ್ಣನ ದರ್ಶನ ಪಡೆದರು. ನಮಗೆಲ್ಲರಿಗೂ ಕೂಡ ಶ್ರೇಷ್ಠ ವಿಚಾರಗಳನ್ನು ದರ್ಶನ ಮಾಡುವಂತ ಅವಕಾಶ ಕನಕ ಜಯಂತಿಯಂದು ಸಿಗಲಿ ಎಂದು ಹಾರೈಸಿದರು. 

ಈ ಸಂದರ್ಭ ಆಹಾರ ನಿರೀಕ್ಷಕ ಎಂ ಎನ್ ರವಿ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವಿಷಯ ನಿರ್ವಾಹಕ ವಿಶು ಕುಮಾರ್, ತಾಲೂಕು ಕಚೇರಿ ಸಿಬ್ಬಂದಿಗಳು, ಗ್ರಾಮ ಆಡಳಿತ ಅಧಿಕಾರಿಗಳು ಗ್ರಾಮ ಸಹಾಯಕರು 

ಭಾಗವಹಿಸಿದ್ದರು. 

  • Blogger Comments
  • Facebook Comments

0 comments:

Post a Comment

Item Reviewed: ಬಂಟ್ವಾಳ ತಾಲೂಕಾಡಳಿತ ವತಿಯಿಂದ ಕನಕದಾಸ ಜಯಂತಿ ಆಚರಣೆ Rating: 5 Reviewed By: karavali Times
Scroll to Top