ಮಂಗಳೂರು, ನವೆಂಬರ್ 19, 2024 (ಕರಾವಳಿ ಟೈಮ್ಸ್) : ಇಂದಿರಾ ಗಾಂಧಿ ಅವರು ಜನಪರ ಹಾಗೂ ರಾಷ್ಟ್ರ ಕೇಂದ್ರೀಕೃತ ನೀತಿಗಳಿಂದ ಜನಪ್ರಿಯರಾಗಿದ್ದರು. ಬ್ಯಾಂಕುಗಳ ರಾಷ್ಟ್ರೀಕರಣ, ಹಸಿರು ಕ್ರಾಂತಿಯ ಮೂಲಕ ದೇಶದ ಆರ್ಥಿಕಾಭಿವೃದ್ಧಿಗೆ ಮುನ್ನುಡಿ ಬರೆದವರು ಎಂದು ಮಾಜಿ ಸಚಿವ ಬಿ ರಮಾನಾಥ ರೈ ಕೊಂಡಾಡಿದರು.
ಮಾಜಿ ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿಯವರ ಜನ್ಮದಿನ ಪ್ರಯುಕ್ತ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಇಂದಿರಾ ಗಾಂಧಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡುತ್ತಿದ ಅವರು, ಇಂದಿರಾ ಗಾಂಧಿ ಅವರು ಸಾಮಾಜಿಕ ನ್ಯಾಯದಿಂದ ವಂಚಿತರಾದ ದುರ್ಬಲ ಜನರ ಪರವಾಗಿ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡಿದರು. ಬಡಜನರ ಬಗೆಗಿನ ಕಾಳಜಿ, ಅವರ ಸ್ಥಿತಿಗತಿಗಳ ಸುಧಾರಣೆಗಾಗಿ ಕೈಗೊಂಡ ದಿಟ್ಟ ಕ್ರಮಗಳು ಇಂದಿರಾ ಗಾಂಧಿಯವರನ್ನು ಇಂದಿಗೂ ಜೀವಂತವಾಗಿರಿಸಿದೆ. ಸಾಲ ಮನ್ನಾ ಜಾರಿಗೆ ತಂದು ಜನ ಸಾಮಾನ್ಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಕಾರಣರಾದರು. ಭೂಮಸೂದೆ ಕಾಯ್ದೆ ಅತ್ಯಂತ ಪರಿಣಾಮಕಾರಿಯಾಗಿ ದ ಕ ಜಿಲ್ಲೆಯಲ್ಲಿ ಜಾರಿಯಾಗಿದೆ. ಬಿಜೆಪಿಗರು ಮತಕ್ಕಾಗಿ ಕೀಳುಮಟ್ಟದ ರಾಜಕೀಯ ಮಾಡಿ ಸಮಾಜವನ್ನು ಒಡೆಯುತ್ತಿದ್ದಾರೆ. ಮೂರ್ಖರು. ಸುಳ್ಳು ಸುದ್ದಿ ಹರಡುವ ಬಿಜೆಪಿಗರು ನಿಜವಾದ ದೇಶದ್ರೋಹಿಗಳು ಎಂದವರು ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ ಹರೀಶ್ ಕುಮಾರ್, ರಾಜ್ಯಸಭಾ ಮಾಜಿ ಸದಸ್ಯ ಬಿ ಇಬ್ರಾಹಿಂ, ಸ್ಟ್ಯಾನಿ ಆಳ್ವರಿಸ್ ಮಾತನಾಡಿದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಜಿ ಎ ಬಾವ, ಪ್ರಮುಖರಾದ ಇಬ್ರಾಹಿಂ ಕೋಡಿಜಾಲ್, ಸುರೇಶ್ ಬಳ್ಳಾಲ್, ಕೆ ಹರಿನಾಥ್, ಶಶಿಧರ್ ಹೆಗ್ಡೆ, ಶಾಹುಲ್ ಹಮೀದ್, ವಿಶ್ವಾಸ್ ಕುಮಾರ್ ದಾಸ್, ಶುಭೋದಯ ಆಳ್ವ, ದಿನೇಶ್ ಮೂಳೂರು, ಜೆ ಅಬ್ದುಲ್ ಸಲೀಂ, ಪ್ರಕಾಶ್ ಸಾಲ್ಯಾನ್, ಕೆ ಅಶ್ರಫ್, ಪದ್ಮನಾಭ ಅಮೀನ್, ಪದ್ಮನಾಭ ರೈ, ಸಂಶುದ್ದೀನ್ ಕುದ್ರೋಳಿ, ಚಿತ್ತರಂಜನ್ ಶೆಟ್ಟಿ, ಫಾರೂಕ್ ಫರಂಗಿಪೇಟೆ, ವಿಕಾಸ್ ಶೆಟ್ಟಿ, ಪ್ರೇಮ್ ನಾಥ್, ಗಿರೀಶ್ ಶೆಟ್ಟಿ ಕದ್ರಿ, ಟಿ ಕೆ ಸುಧೀರ್, ಸತೀಶ್ ಪೆಂಗಲ್, ಚೇತನ್ ಕುಮಾರ್, ಅಬ್ದುಲ್ ರಹಿಮಾನ್ ಕೋಡಿಜಾಲ್, ಶಬ್ಬೀರ್ ಎಸ್, ಯೋಗೀಶ್ ಕುಮಾರ್, ವಹಾಬ್ ಕುದ್ರೋಳಿ, ಮಕ್ಬೂಲ್ ಕುದ್ರೋಳಿ, ಪ್ರೇಮ್ ಬಳ್ಳಾಲ್ ಭಾಗ್, ನಿತ್ಯಾನಂದ ಶೆಟ್ಟಿ, ರೂಪ ಚೇತನ್, ರಮಾನಂದ ಪೂಜಾರಿ, ಸಮರ್ಥ್ ಭಟ್, ಜಾರ್ಜ್, ಶಾಂತಲಾ ಗಟ್ಟಿ, ಇಮ್ರಾನ್ ಎ ಆರ್, ಜಿ ಎ ಜಲೀಲ್, ರವೀಂದ್ರ ಪೂಜಾರಿ, ಆಲ್ವಿನ್ ಪ್ರಕಾಶ್, ರಮ್ಲಾನ್ ಮಾರಿಪಳ್ಳ ಮೊದಲಾದವರು ಭಾಗವಹಿಸಿದ್ದರು.
0 comments:
Post a Comment