ಬಂಟ್ವಾಳ, ನವೆಂಬರ್ 30, 2024 (ಕರಾವಳಿ ಟೈಮ್ಸ್) : ಅಕ್ರಮ ಮಟ್ಕಾ ದಂಧೆ ನಡೆಸುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿದ ಬಂಟ್ವಾಳ ನಗರ ಠಾಣಾ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದುಕೊಂಡ ಘಟನೆ ಬಿ ಕಸಬಾ ಗ್ರಾಮದ ತುಂಬ್ಯ ಜಂಕ್ಷನ್ ಎಂಬಲ್ಲಿ ಗುರುವಾರ ಸಂಜೆ ನಡೆದಿದೆ.
ಬಂಧಿತ ಆರೋಪಿಗಳನ್ನು ಉಳ್ಳಾಲ ತಾಲೂಕು, ಬೋಳಿಯಾರು ನಿವಾಸಿ ಅಬೂಬಕ್ಕರ್ (38) ಹಾಗೂ ಬಂಟ್ವಾಳ ತಾಲೂಕು ಸಜಿಪಮೂಡ ಗ್ರಾಮದ ನಿವಾಸಿ ದಿನೇಶ್ ಕುಮಾರ್ (36) ಎಂದು ಗುರುತಿಸಲಾಗಿದೆ.
ಶುಕ್ರವಾರ ಸಂಜೆ ಬಿ ಕಸಬಾ ಗ್ರಾಮದ ತುಂಬ್ಯ ಜಂಕ್ಷನ್ ಬಳಿಯಿರುವ ಹೋಟೇಲ್ ಸಮೀಪದ ಸಾರ್ವಜನಿಕ ಸ್ಥಳದಲ್ಲಿ ಆರೋಪಿಗಳು ಅಂಕೆ ಸಂಖ್ಯೆಗಳ ಮೇಲೆ ಹಣವನ್ನು ಪಣವನ್ನಾಗ್ಗಿಟ್ಟುಕೊಂಡು ಅಕ್ರಮವಾಗಿ ಮಟ್ಕಾ ಚೀಟಿ ಬರೆಯುತ್ತಿದ್ದ ಬಗ್ಗೆ ಖಚಿತ ಮಾಹಿತಿ ಬಂದ ಮೇರೆಗೆ ಬಂಟ್ವಾಳ ನಗರ ಪೊಲೀಸ್ ಠಾಣಾ ಪಿಎಸ್ಸೈ ರಾಮಕೃಷ್ಣ ಅವರ ನೇತೃತ್ವದ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ. ಬಂಧಿತರಿಂದ ಪೊಲೀಸರು 2,850/- ರೂಪಾಯಿ ನಗದು ಹಣ ಹಾಗೂ ಮಟ್ಕಾ ಚೀಟಿಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment