ಬಂಟ್ವಾಳ, ನವೆಂಬರ್ 17, 2024 (ಕರಾವಳಿ ಟೈಮ್ಸ್) : ಸಿಡಿಲು ಬಡಿದು ಹೈಸ್ಕೂಲ್ ವಿದ್ಯಾರ್ಥಿಯೋರ್ವ ದಾರುಣವಾಗಿ ಮೃತಪಟ್ಟ ಘಟನೆ ಕೆದಿಲ ಗ್ರಾಮದ ಗಡಿಯಾದ ಸಮೀಪದ ಮುರಿಯಾಜೆ ಎಂಬಲ್ಲಿ ಭಾನುವಾರ ಸಂಜೆ ಸಂಭವಿಸಿದೆ.
ಮೃತ ಬಾಲಕನನ್ನು ಸ್ಥಳೀಯ ನಿವಾಸಿ ಚಂದ್ರಹಾಸ ಎಂಬವರ ಪುತ್ರ, ಕಲ್ಲಡ್ಕ ಶ್ರೀರಾಮ ಹೈಸ್ಕೂಲ್ 8ನೇ ತರಗತಿ ವಿದ್ಯಾರ್ಥಿ ಸುಭೋದ್ (14) ಎಂದು ಹೆಸರಿಸಲಾಗಿದೆ.
ವಿದ್ಯಾರ್ಥಿ ಮನೆಯಲ್ಲಿದ್ದ ವೇಳೆ ಭಾನುವಾರ ಸಂಜೆ 5 ಗಂಟೆ ವೇಳೆಗೆ ಬಂದ ಸಿಡಿಲು ಬಡಿದು ಈ ಅವಘಡ ಸಂಭವಿಸಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಪುತ್ತೂರು ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.
ವಿಟ್ಲ ಕಂದಾಯ ನಿರೀಕ್ಷಕ ಪ್ರಶಾಂತ್ ಶೆಟ್ಟಿ, ಕೆದಿಲ ಗ್ರಾಮ ಆಡಳಿತ ಅಧಿಕಾರಿ ಅನಿಲ್ ಕುಮಾರ್, ಕೆದಿಲ ಗ್ರಾಮ ಪಂಚಾಯತ್ ಅಧ್ಯಕ್ಷ ಹರೀಶ್ ವಾಲ್ತಾಜೆ ಅವರುಗಳು ಪುತ್ತೂರು ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
0 comments:
Post a Comment