ಬಂಟ್ವಾಳ, ನವೆಂಬರ್ 15, 2024 (ಕರಾವಳಿ ಟೈಮ್ಸ್) : ರಸ್ತೆ ದಾಟಲು ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿ ಹೊಡೆದು ಮೃತಪಟ್ಟ ಘಟನೆ ಕಾಡಬೆಟ್ಟು ಗ್ರಾಮದ ವಗ್ಗ-ಕಾಡಬೆಟ್ಟು ಕ್ರಾಸ್ ಎಂಬಲ್ಲಿ ಗುರುವಾರ ಬೆಳಿಗ್ಗೆ ಸಂಭವಿಸಿದೆ.
ಮೃತ ವ್ಯಕ್ತಿಯನ್ನು ವಗ್ಗ ನಿವಾಸಿ ಮೊಹಮ್ಮದ್ ರಫೀಕ್ (55) ಎಂದು ಹೆಸರಿಸಲಾಗಿದೆ. ಇವರು ಗುರುವಾರ ಬೆಳಿಗ್ಗೆ ಕಾಡಬೆಟ್ಟು ಕ್ರಾಸ್ ಎಂಬಲ್ಲಿ ರಸ್ತೆ ದಾಟಲು ನಿಂತಿದ್ದ ವೇಳೆ ಪವನ್ ಎಂಬವರು ಚಲಾಯಿಸಿಕೊಂಡು ಬಂದ ಬೈಕ್ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ.
ಅಪಘಾತದಿಂದ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ರಫೀಕ್ ಅವರನ್ನು ಸ್ಥಳೀಯರು ತಕ್ಷಣ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಿದ್ದಾರಾದರೂ ಅದಾಗಲೇ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment