ಬಂಟ್ವಾಳ, ಡಿಸೆಂಬರ್ 08, 2024 (ಕರಾವಳಿ ಟೈಮ್ಸ್) : ಬಂಟ್ವಾಳ ತಾಲೂಕು ಬಿಲ್ಲವ ಸೇವಾ ಸಂಘದ ಆಶ್ರಯದಲ್ಲಿ ಯುವವಾಹಿನಿ ಹಾಗೂ ಬಿಲ್ಲವ ಮಹಿಳಾ ಸಮಿತಿ ಇದರ ಜಂಟಿ ಆಶ್ರಯದಲ್ಲಿ 2025 ರ ಜನವರಿ 19 ರಂದು ನಡೆಯುವ ತಾಲೂಕು ಮಟ್ಟದ ಕೋಟಿ ಚೆನ್ನಯ ಕ್ರೀಡೋತ್ಸವ-2025 ಇದರ ಲಾಂಛನ ಬಿಡುಗಡೆ ಹಾಗೂ ಕರಪತ್ರ ಪತ್ರ ಬಿಡುಗಡೆ ಕಾರ್ಯಕ್ರಮ ಬಿ ಸಿ ರೋಡಿನ ಬ್ರಹ್ಮ ಶ್ರೀ ನಾರಾಯಣ ಗುರು ಸಭಾ ಭವನದಲ್ಲಿ ಭಾನುವಾರ ಸಂಜೆ ನಡೆಯಿತು.
ಲಾಂಛನ ಬಿಡುಗಡೆಗೊಳಿಸಿದ ಉದ್ಯಮಿ, ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಟ್ರಸ್ಟಿ ಜಗದೀಶ್ ಡಿ ಸುವರ್ಣ ಮಾತನಾಡಿ, ಬಿಲ್ಲವ ಸಮುದಾಯದ ಒಗ್ಗಟ್ಟು ಹಾಗೂ ಅಭಿವೃದ್ದಿಯ ದೃಷ್ಟಿಯಿಂದ ಸಮುದಾಯದ ಮಂದಿಗೆ ಕ್ರೀಡಾಕೂಟ ಆಯೋಜಿಸಲಾಗುತ್ತಿದ್ದು, ಸಮಿತಿಯ ಜೊತೆ ಸಮಾಜ ಬಾಂಧವರು ಉತ್ತಮ ರೀತಿಯಲ್ಲಿ ಸ್ಪಂದಿಸುವಂತೆ ಕರೆ ನೀಡಿದರು.
ತಾಲೂಕು ಬಿಲ್ಲದ ಸಂಘದ ಅಧ್ಯಕ್ಷ ಸಂಜೀವ ಪೂಜಾರಿ ಗುರುಕೃಪಾ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಬಿಲ್ಲವ ಸಂಘದ ಮಾಜಿ ಅಧ್ಯಕ್ಷರುಗಳಾದ ಹರಿಕೃಷ್ಣ ಬಂಟ್ವಾಳ್, ಚಂದ್ರಶೇಖರ ಪೂಜಾರಿ, ರಾಮಪ್ಪ ಪೂಜಾರಿ ಮಾರ್ನಬೈಲು, ಬಿಲ್ಲವ ಮಹಿಳಾ ಸಮಿತಿ ಅಧ್ಯಕ್ಷೆ ಶೈಲಜಾ ರಾಜೇಶ್, ಪ್ರಚಾರ ಸಮಿತಿ ಸಂಚಾಲಕ ಶ್ರೀನಿವಾಸ ಪೂಜಾರಿ ಮೆಲ್ಕಾರ್, ಕೋಶಾಧಿಕಾರಿ ಆನಂದ ಶಂಭೂರು ಅತಿಥಿಗಳಾಗಿದ್ದರು.
ಇದೇ ವೇಳೆ ಕಾರ್ಯಕ್ರಮದ ಲಾಂಛನ ಹಾಗೂ ಕರಪತ್ರ ಬಿಡುಗಡೆಗೊಳಿಸಲಾಯಿತು. ಕೋಟಿ ಚೆನ್ನಯ ಕ್ರೀಡೋತ್ಸವ ಕಾರ್ಯಕ್ರಮದ ಸಂಚಾಲಕ ಬೇಬಿ ಕುಂದರ್ ಸ್ವಾಗತಿಸಿ, ಪ್ರಸ್ತಾವನೆಗೈದರು. ಪ್ರಧಾನ ಕಾರ್ಯದರ್ಶಿ ರಮೇಶ್ ಎಂ ತುಂಬೆ ವಂದಿಸಿದರು. ಯುವವಾಹಿನಿ ಅಧ್ಯಕ್ಷ ದಿನೇಶ್ ರಾಯಿ ಕಾರ್ಯಕ್ರಮ ನಿರೂಪಿಸಿದರು.
0 comments:
Post a Comment