ಗೋಳ್ತಮಜಲು : ಡಿಸೆಂಬರ್ 7 ರಂದು ಜೆಮ್ ಪಬ್ಲಿಕ್ ಶಾಲೆಯ ಬೆಳ್ಳಿಹಬ್ಬ ಆಚರಣೆ ಪ್ರಯುಕ್ತ ವಿವಿಧ ಕಾರ್ಯಕ್ರಮಗಳು - Karavali Times ಗೋಳ್ತಮಜಲು : ಡಿಸೆಂಬರ್ 7 ರಂದು ಜೆಮ್ ಪಬ್ಲಿಕ್ ಶಾಲೆಯ ಬೆಳ್ಳಿಹಬ್ಬ ಆಚರಣೆ ಪ್ರಯುಕ್ತ ವಿವಿಧ ಕಾರ್ಯಕ್ರಮಗಳು - Karavali Times

728x90

4 December 2024

ಗೋಳ್ತಮಜಲು : ಡಿಸೆಂಬರ್ 7 ರಂದು ಜೆಮ್ ಪಬ್ಲಿಕ್ ಶಾಲೆಯ ಬೆಳ್ಳಿಹಬ್ಬ ಆಚರಣೆ ಪ್ರಯುಕ್ತ ವಿವಿಧ ಕಾರ್ಯಕ್ರಮಗಳು

 ಬಂಟ್ವಾಳ, ಡಿಸೆಂಬರ್ 04, 2024 (ಕರಾವಳಿ ಟೈಮ್ಸ್) : ತಾಲೂಕಿನ ಕಲ್ಲಡ್ಕ ಸಮೀಪದ ಗೋಳ್ತಮಲು ಎಂಬಲ್ಲಿ ಫಾತಿಮಾ ಮೆಮೋರಿಯಲ್ ಎಜ್ಯುಕೇಶನಲ್ ಟ್ರಸ್ಟ್ (ರಿ) ಇದರ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಜೆಮ್ ಪಬ್ಲಿಕ್ ಸ್ಕೂಲ್ ಇದರ ಬೆಳ್ಳಿ ಹಬ್ಬ ಆಚರಣೆ ಹಾಗೂ ಶಾಲಾ ವಾರ್ಷಿಕೋತ್ಸವದ ಪ್ರಯುಕ್ತ ವಿವಿಧ ಕಾರ್ಯಕ್ರಮಗಳು ಡಿಸೆಂಬರ್ 7 ರಂದು ಶನಿವಾರ ಬೆಳಿಗ್ಗೆ 9.30ಕ್ಕೆ ಜೆಮ್ ಶಾಲಾ ವಠಾರದಲ್ಲಿ ನಡೆಯಲಿದೆ. 

ರಾಜ್ಯ ವಿಧಾನಸಭಾ ಸ್ಪೀಕರ್ ಯು ಟಿ ಖಾದರ್ ಬೆಳ್ಳಿಹಬ್ಬ ಸ್ಮರಣ ಸಂಚಿಕೆ ‘ರಜತ ರತ್ನ’ ಬಿಡುಗಡೆಗೊಳಿಸುವರು. ಮೂಡಬಿದ್ರೆ ಆಳ್ವಾಸ್ ಎಜ್ಯುಕೇಶನ್ ಫೌಂಡೇಶನ್ ಚೆಯರ್ ಮ್ಯಾನ್ ಡಾ ಎಂ ಮೋಹನ್ ಆಳ್ವ ಬೆಳ್ಳಿಹಬ್ಬ ನಾಮಫಲಕ ಅನಾವರಣಗೊಳಿಸುವರು. ಉದ್ಯಮಿ ರೊನಾಲ್ಡ್ ಮಾರ್ಟಿಸ್ ವಸ್ತು ಪ್ರದರ್ಶನ ಉದ್ಘಾಟಿಸಲಿದ್ದು, ಫಾತಿಮಾ ಮೆಮೋರಿಯಲ್ ಎಜ್ಯುಕೇಶನಲ್ ಟ್ರಸ್ಟ್ ಚೆಯರ್ ಮ್ಯಾನ್ ಹಾಜಿ ಜಿ ಅಬೂಬಕ್ಕರ್ ಅಧ್ಯಕ್ಷತೆ ವಹಿಸುವರು. 

ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಬಿ ರಮಾನಾಥ ರೈ, ಬಂಟ್ವಾಳ ಶಾಸಕ ಯು ರಾಜೇಶ್ ನಾಯಕ್, ಎಂ ಇ ಐ ಎಫ್ ಅಧ್ಯಕ್ಷ ಮೂಸಬ್ಬ ಪಿ ಬ್ಯಾರಿ, ಡಿಡಿಪಿಐ ವೆಂಕಟೇಶ್ ಪಟಗಾರ್, ಗೋಳ್ತಮಜಲು ಗ್ರಾಮ ಪಂಚಾಯತ್ ಅಧ್ಯಕ್ಷೆ ಪ್ರೇಮಾ ಪುರುಷೋತ್ತಮ, ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಎಂ ಜಿ ಅವರು ಭಾಗವಹಿಸುವರು. 

ಅಪರಾಹ್ನ 1.30 ರಿಂದ ಸಂಜೆ 5.30 ರವರೆಗೆ ಕೆ ಎಸ್ ಯಾಸೀರ್ ಅವರಿಂದ ಕಲ್ಲಡ್ಕ ಮ್ಯೂಸಿಯಂ ವಸ್ತು ಪ್ರದರ್ಶನ, 2 ರಿಂದ 3.30ರವರೆಗೆ ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮಗಳು, ಸಂಜೆ 3.30 ರಿಂದ 5 ರವರೆಗೆ ಮೆಗಾ ಸ್ಟಾರ್ ಕುದ್ರೋಳಿ ಗಣೇಶ್ ಅವರಿಂದ ಮ್ಯಾಜಿಕ್ ಶೋ ಕಾರ್ಯಕ್ರಮಗಳು ನಡೆಯಲಿದೆ. 

ಈ ಪ್ರಯುಕ್ತ ಡಿಸೆಂಬರ್ 6 ರಂದು ಶುಕ್ರವಾರ ಬೆಳಿಗ್ಗೆ 9.30ಕ್ಕೆ ಫಾತಿಮಾ ಮೆಮೋರಿಯಲ್ ಎಜ್ಯುಕೇಶನಲ್ ಟ್ರಸ್ಟ್ ವೈಸ್ ಚೆಯರ್ ಮ್ಯಾನ್ ಹಾಜಿ ಜಿ ಅಬ್ದುಲ್ ರಝಾಕ್ ಅವರಿಂದ ಧ್ವಜಾರೋಹಣ ನೆರವೇರಲಿದ್ದು, ಮಧ್ಯಾಹ್ನ 2 ಗಂಟೆಗೆ ಟ್ರಸ್ಟ್ ಸಂಚಾಲಕ ಹಾಜಿ ಜಿ ಅಹ್ಮದ್ ಮುಸ್ತಫಾ ಅವರ ಅಧ್ಯಕ್ಷತೆಯಲ್ಲಿ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಲಿದೆ. 

ಡಿಸೆಂಬರ್ 8 ರಂದು ಭಾನುವಾರ ಬೆಳಿಗ್ಗೆ 9.30ಕ್ಕೆ ನಡೆಯುವ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಫಾತಿಮಾ ಮೆಮೋರಿಯಲ್ ಎಜ್ಯುಕೇಶನಲ್ ಟ್ರಸ್ಟ್ ಇದರ ಮ್ಯಾನೇಜಿಂಗ್ ಟ್ರಸ್ಟಿ, ರಾಜ್ಯೋತ್ಸವ ಪ್ರಶಸ್ತಿ ವಿಜೇತ ಸಾಮಾಜಿಕ ಸಂಘಟಕ ಹಾಜಿ ಜಿ ಮುಹಮ್ಮದ್ ಹನೀಫ್ ಗೋಳ್ತಮಜಲು ಅವರು ವಹಿಸಲಿದ್ದು, ಉದ್ಯಮಿ ಮುಸ್ತಫಾ ಎಸ್ ಎಂ ಮಂಗಳೂರು ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಶಾಲಾ ಪ್ರಕಟಣೆ ತಿಳಿಸಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಗೋಳ್ತಮಜಲು : ಡಿಸೆಂಬರ್ 7 ರಂದು ಜೆಮ್ ಪಬ್ಲಿಕ್ ಶಾಲೆಯ ಬೆಳ್ಳಿಹಬ್ಬ ಆಚರಣೆ ಪ್ರಯುಕ್ತ ವಿವಿಧ ಕಾರ್ಯಕ್ರಮಗಳು Rating: 5 Reviewed By: karavali Times
Scroll to Top