ಮಂಗಳೂರು, ಫೆಬ್ರವರಿ 13, 2025 (ಕರಾವಳಿ ಟೈಮ್ಸ್) : ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಜಾತಿ ಘಟಕದ ಪದಗ್ರಹಣ ಕಾರ್ಯಕ್ರಮ ಹಾಗೂ ಸಂವಿಧಾನ ಜಾಗೃತಿ ಸಮಾವೇಶ ಫೆ. 18 ರಂದು ನಗರದ ಊರ್ವಸ್ಟೋರ್ ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಜಿಲ್ಲಾಧ್ಯಕ್ಷ ದಿನೇಶ್ ಮುಳೂರು ತಿಳಿಸಿದ್ದಾರೆ.
ಗುರುವಾರ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂದು ಮಧ್ಯಾಹ್ನ 2 ಗಂಟೆಗೆ ರಾಜ್ಯ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ನಾರಾಯಣ ಗುರು ವೃತ್ತದಲ್ಲಿರುವ ಬ್ರಹ್ಮಶ್ರೀ ನಾರಾಯಣ ಗುರು ಪ್ರತಿಮೆಗೆ ಮಾಲಾರ್ಪಣೆ ಮಾಡಿ ಬಳಿಕ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕೆಪಿಸಿಸಿ ಪರಿಶಿಷ್ಟ ಜಾತಿ ಘಟಕದ ರಾಜ್ಯಾಧ್ಯಕ್ಷ ಆರ್. ಧರ್ಮಸೇನ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅಥಿತಿಗಳಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್, ಮಾಜಿ ಸಚಿವರಾದ ಬಿ. ರಮಾನಾಥ ರೈ, ಅಭಯಚಂದ್ರ ಜೈನ್, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ, ಶಾಸಕ ಅಶೋಕ ಕುಮಾರ್ ರೈ, ಮಾಜಿ ಶಾಸಕ ಜೆ.ಆರ್. ಲೋಬೊ, ಕೆಪಿಸಿಸಿ ಕಾರ್ಯದರ್ಶಿಗಳಾದ ಪದ್ಮರಾಜ್ ಆರ್, ಮಿಥುನ್ ರೈ, ಎಂ.ಎಸ್. ಮಹಮ್ಮದ್, ಇನಾಯತ್ ಅಲಿ, ರಕ್ಷಿತ್ ಶಿವರಾಂ, ಕೆಪಿಸಿಸಿ ಸಂಯೋಜಕ ಕೃಷ್ಣಪ್ಪ ಜಿ, ರಾಜ್ಯ ಗೇರು ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಜಿಲ್ಲಾ ಪರಿಶಿಷ್ಟ ಜಾತಿ ಘಟಕದ ನಿಕಟಪೂರ್ವ ಅಧ್ಯಕ್ಷ ಶೇಖರ್ ಕುಕ್ಕೇಡಿ, ಕೆಪಿಸಿಸಿ ಸದಸ್ಯೆ ಎಸ್. ಅಪ್ಪಿ, ಮೂಡಾ ಅಧ್ಯಕ್ಷ ಸದಾಶಿವ್ ಉಳ್ಳಾಲ್, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಭರತ್ ಮುಂಡೋಡಿ ಹಾಗೂ ಜಿಲ್ಲಾ ಕಾಂಗ್ರೆಸ್ ಮುಂಚೂಣಿ ಘಟಕದ ಅಧ್ಯಕ್ಷರುಗಳು ಭಾಗವಹಿಸಲಿದ್ದಾರೆ ಎಂದರು.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಜಿಲ್ಲಾ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಹಾಗೂ ಸಮಾನ ಮನಸ್ಕರು ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಲು ಇದೇ ವೇಳೆ ಅವರು ಕರೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಕೆಪಿಸಿಸಿ ಸದಸ್ಯೆ ಎಸ್. ಅಪ್ಪಿ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರೇಮ್ ನಾಥ್ ಬಳ್ಳಾಲ್ ಭಾಗ್, ಜಿಲ್ಲಾ ಪರಿಶಿಷ್ಟ ಘಟಕದ ಪ್ರಧಾನ ಕಾರ್ಯದರ್ಶಿಗಳಾದ ಗಣೇಶ್ ಪ್ರಸಾದ್, ಕಿರಣ್ ಕುಮಾರ್, ಮಾಜಿ ಕಾರ್ಪೊರೇಟರ್ ಗಳಾದ ನಾಗವೇಣಿ, ವಿಜಯಲಕ್ಷ್ಮೀ, ಪರಿಶಿಷ್ಟ ಘಟಕದ ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷ ಅಭಿಲಾಷ್ ಕೃಷ್ಣಾಪುರ, ಸುಳ್ಯ ಬ್ಲಾಕ್ ಅಧ್ಯಕ್ಷ ಮಹೇಶ್ ಬೆಳ್ಳಾರ್ಕರ್, ಪುತ್ತೂರು ಬ್ಲಾಕ್ ಅಧ್ಯಕ್ಷ ಬಾಬು ಮರಿಕೆ, ಸರೋಜಿನಿ ಬಂಟ್ವಾಳ ಉಪಸ್ಥಿತರಿದ್ದರು.











0 comments:
Post a Comment