ಬಂಟ್ವಾಳ, ಫೆಬ್ರವರಿ 04, 2025 (ಕರಾವಳಿ ಟೈಮ್ಸ್) : ಸವಿತಾ ಮಹರ್ಷಿಯವರು ಆದರ್ಶ ಪುರುಷರಾಗಿ ತಮ್ಮ ಸಮಾಜದ ಶ್ರೇಷ್ಠತೆಗೆ ಶ್ರಮಿಸಿದವರು. ತಮ್ಮ ಅನುಯಾಯಿಗಳಿಗೆ ಸರಿಯಾದ ರೀತಿಯಲ್ಲಿ ಮಾರ್ಗದರ್ಶನ ಮಾಡಿದವರು ಎಂದು ಬಂಟ್ವಾಳ ತಾಲೂಕು ತಹಶೀಲ್ದಾರ್ ಡಿ ಅರ್ಚನಾ ಭಟ್ ಹೇಳಿದರು.
ಬಂಟ್ವಾಳ ತಾಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಸವಿತಾ ಜಯಂತಿ ಆಚರಣೆ ಉದ್ಘಾಟಿಸಿ ಅವರು ಮಾತನಾಡಿದರು.
ಸವಿತಾ ಸೌಹಾರ್ದ ಸಹಕಾರಿ ನಿಯಮಿತ ಹಾಗೂ ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವಿಶ್ವನಾಥ ಬಂಟ್ವಾಳ, ಕೇಂದ್ರ ಸ್ಥಾನೀಯ ಉಪತಹಶೀಲ್ದಾರ್ ನರೇಂದ್ರನಾಥ ಮಿತ್ತೂರು, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಶು ಕುಮಾರ್, ತಾಲೂಕು ಕಛೇರಿ ಸಿಬ್ಬಂದಿಗಳು, ಗ್ರಾಮ ಆಡಳಿತ ಅಧಿಕಾರಿಗಳು, ಗ್ರಾಮ ಸಹಾಯಕರು ಭಾಗವಹಿಸಿದ್ದರು.
0 comments:
Post a Comment