ಬಂಟ್ವಾಳ, ಮಾರ್ಚ್ 20, 2025 (ಕರಾವಳಿ ಟೈಮ್ಸ್) : ಅಟೋ ರಿಕ್ಷಾ ಡಿಕ್ಕಿ ಹೊಡೆದು ಮೂವರು ಶಾಲಾ ಮಕ್ಕಳು ಗಾಯಗೊಂಡ ಘಟನೆ ಗೋಳ್ತಮಜಲು ಗ್ರಾಮದ ಕೆ ಸಿ ರೋಡು ಎಂಬಲ್ಲಿ ಬುಧವಾರ ಸಂಭವಿಸಿದೆ.
ಗಾಯಾಳು ವಿದ್ಯಾರ್ಥಿಗಳನ್ನು ಇಲ್ಲಿನ ಜೆಮ್ ಪಬ್ಲಿಕ್ ಶಾಲಾ ವಿದ್ಯಾರ್ಥಿಗಳಾದ ಅಹ್ಮದ್ ಝಿಹಾನ್ (7), ಆಯಿಷಾ ಅನ್ಸಿಫಾ (13) ಹಾಗೂ ಅವ್ವ ಅನ್ಸಾಬ (11) ಎಂದು ಹೆಸರಿಸಲಾಗಿದೆ.
ವಿದ್ಯಾರ್ಥಿಗಳು ಶಾಲಾ ಸಮವಸ್ತ್ತ ಧರಿಸಿ ರಸ್ತೆ ಬದಿ ಬಸ್ಸಿಗಾಗಿ ಕಾಯುತ್ತಾ ನಿಂತಿದ್ದ ವೇಳೆ ನಾಗೇಶ್ ದೇವಾಡಿಗ ಎಂಬವರು ಚಲಾಯಿಸಿಕೊಂಡು ಬಂದ ಅಟೋ ರಿಕ್ಷಾ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಅಟೋ ರಿಕ್ಷಾ ಹಾಗೂ ಮಕ್ಕಳು ರಸ್ತೆ ಬದಿಯ ಚರಂಡಿಗೆ ಬಿದ್ದ ಪರಿಣಾಮ ಮಕ್ಕಳ ದೇಹದ ವಿವಿಧ ಭಾಗಗಳಿಗೆ ಗಾಯಗಳಾಗಿವೆ. ಅಟೋ ಚಾಲಕಗೆ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ. ಈ ಬಗ್ಗೆ ಗೋಳ್ತಮಜಲು ನಿವಾಸಿ ಸಲ್ಮಾನ್ ಅವರು ನೀಡಿದ ದೂರಿನಂತೆ ಬಂಟ್ವಾಳ ಸಂಚಾರಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment