ಬಂಟ್ವಾಳ, ಮಾರ್ಚ್ 18, 2025 (ಕರಾವಳಿ ಟೈಮ್ಸ್) : ಚಾಲಕನ ನಿಯಂತ್ರಣ ಮೀರಿ ಸ್ಕೂಟರ್ ರಸ್ತೆಗೆ ಬಿದ್ದು ಇಬ್ಬರು ಗಾಯಗೊಂಡ ಘಟನೆ ಬೋಳಂಗಡಿ ಮಸೀದಿ ಬಳಿ ಭಾನುವಾರ ಮಧ್ಯರಾತ್ರಿ ವೇಳೆ ಸಂಭವಿಸಿದೆ.
ಗಾಯಾಳು ಸ್ಕೂಟರ್ ಸವಾರರನ್ನು ಸಜಿಪಮುನ್ನೂರು ಗ್ರಾಮದ ಆಲಾಡಿ-ಇಂದಿರಾ ನಗರ ನಿವಾಸಿ ಫೈಜಲ್ (24) ಹಾಗೂ ರಾಝೀಕ್ ಎಂದು ಹೆಸರಿಸಲಾಗಿದೆ. ರಾಝಿಕ್ ಸವಾರರಾಗಿ ಫೈಜಲ್ ಸಹಸವಾರರಾಗಿ ಸ್ಕೂಟರಿನಲ್ಲಿ ಭಾನುವಾರ ಮಧ್ಯರಾತ್ರಿ ಸುಮಾರು 1.20 ರ ವೇಳೆಗೆ ಮೆಲ್ಕಾರ್ ಕಡೆಯಿಂದ ಬೋಳಂಗಡಿ ಮಸೀದಿಗೆ ತೆರಳುತ್ತಿದ್ದ ವೇಳೆ ಬೋಳಂಗಡಿ ಮಸೀದಿ ತಲುಪುವಷ್ಟರಲ್ಲಿ ಚಾಲಕನ ನಿಯಂತ್ರಣ ಮೀರಿ ಸ್ಕೂಟರ್ ರಸ್ತೆಗೆ ಎಸೆಯಲ್ಪಟ್ಟು ಈ ಅಪಘಾತ ಸಂಭವಿಸಿದೆ.
ಅಪಘಾತದಿಂದ ಇಬ್ಬರು ಸವಾರರಿಗೂ ಗಾಯಗಳಾಗಿದ್ದು, ಅವರನ್ನು ಮಂಗಳೂರು ಕಣಚೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಫೈಜಲ್ ನೀಡಿದ ದೂರಿನ ಮೇರೆಗೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment