ಬಂಟ್ವಾಳ, ಮಾರ್ಚ್ 20, 2025 (ಕರಾವಳಿ ಟೈಮ್ಸ್) : ಪುದು ಗ್ರಾಮದ ಫರಂಗಿಪೇಟೆಯಲ್ಲಿ ಮಾರ್ಚ್ 13 ರಂದು ಕಾರು ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಸ್ಕೂಟರ್ ಸವಾರ ಚಿಕಿತ್ಸೆಗೆ ಸ್ಪಂದಿಸದೆ ಬುಧವಾರ ಮೃತಪಟ್ಟಿದ್ದಾರೆ. ಮೃತ ಸ್ಕೂಟರ್ ಸವಾರನನ್ನು ಪುದು ಗ್ರಾಮದ ಕುಮ್ಡೇಲು ನಿವಾಸಿ ರವಿ (54) ಎಂದು ಹೆಸರಿಸಲಾಗಿದೆ.
ಮಂಗಳೂರು-ಪಚ್ಚನಾಡಿ ನಿವಾಸಿ ಅಮಿನ್ ಬಿನ್ ರಾಮ ಅಮಿನ್ ಎಂಬವರು ಮಾ 13 ರಂದು ಕಾರಿನಲ್ಲಿ ತೆರಳುತ್ತಿದ್ದ ವೇಳೆ ಸಂಜೆ 6.25ರ ವೇಳೆಗೆ ಫರಂಗಿಪೇಟೆ ಎಂಬಲ್ಲಿ ಹೆದ್ದಾರಿಯ ರಾಂಗ್ ಸೈಡಿನಲ್ಲಿ ಹೆಲ್ಮೆಟ್ ಧರಿಸದೆ ಬಂದ ಸ್ಕೂಟರ್ ಸವಾರ ರವಿ ಅವರು ಕಾರಿನ ಬಲಭಾಗಕ್ಕೆ ಡಿಕ್ಕಿ ಹೊಡೆದು ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡಿದ್ದರು. ತಕ್ಷಣ ಅವರನ್ನು ಕಾರು ಚಾಲಕ ಹಾಗೂ ಸ್ಥಳೀಯರು ಉಚರಿಸಿ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ಸಾಗಿಸಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದ ಅವರು ಬುಧವಾರ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment