ಬಂಟ್ವಾಳ, ಮಾರ್ಚ್ 21, 2025 (ಕರಾವಳಿ ಟೈಮ್ಸ್) : ಬೈಕ್ ಡಿಕ್ಕಿ ಹೊಡೆದು ಪಾದಚಾರಿ ವ್ಯಕ್ತಿ ಗಾಯಗೊಂಡ ಘಟನೆ ಪೆರುವಾಯಿ ಗ್ರಾಮದ ಬೆರಿಪದವು ಎಂಬಲ್ಲಿ ಗುರುವಾರ ಬೆಳಿಗ್ಗೆ ಸಂಭವಿಸಿದೆ.
ಗಾಯಾಳು ಪಾದಚಾರಿ ವ್ಯಕ್ತಿಯನ್ನು ಕಡೆಂಬಿಲ ನಿವಾಸಿ ಕುಂಞಪ್ಪ ನಾಯ್ಕ ಎಂದು ಹೆಸರಿಸಲಾಗಿದೆ. ಇವರು ತನ್ನ ಪುತ್ರಿ ಕುಸುಮಾ ಅವಳ ಜೊತೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಚಂದ್ರಶೇಖರ ಎಂಬವರು ಚಲಾಯಿಸಿಕೊಂಡು ಬಂದ ಬೈಕ್ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಅಪಘಾತದಿಂದ ರಸ್ತೆಗೆ ಬಿದ್ದ ಕುಂಞಪ್ಪ ನಾಯ್ಕ ಅವರ ಕೈ, ಕಾಲು ಹಾಗೂ ಸೊಂಟಕ್ಕೆ ಗಾಯಗಳಾಗಿದ್ದು, ಅವರನ್ನು ವಿಟ್ಲ ಸರಕಾರಿ ಆಸ್ಪತ್ರೆಗೆ ಸಾಗಿಸಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರು ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment