ಮಂಗಳೂರು, ಮಾರ್ಚ್ 20, 2025 (ಕರಾವಳಿ ಟೈಮ್ಸ್) : ಮಾರ್ಚ್ 21 ಶುಕ್ರವಾರದಿಂದ ರಾಜ್ಯಾದ್ಯಂತ ಎಸ್ಸೆಸ್ಸೆಲ್ಸಿ ಪರೀಕ್ಷೆ-1 ಆರಂಭವಾಗಲಿದ್ದು, ಎಪ್ರಿಲ್ 4ರವರೆಗೆ ನಡೆಯಲಿದೆ. ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲೂ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಜಿಲ್ಲೆಯ ಒಟ್ಟು 92 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಒಟ್ಟು 29,760 ಮಂದಿ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಪರೀಕ್ಷಾ ಸಂಬಂಧ ಒಟ್ಟು 2057 ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 184 ಪೆÇಲೀಸ್ ಸಿಬ್ಬಂದಿ ಹಾಗೂ ಪರೀಕ್ಷಾ ಪ್ರಶ್ನೆ ಪತ್ರಿಕೆ ಹಾಗೂ ಉತ್ತರ ಪತ್ರಿಕೆಗಳ ಸಾಗಾಟಕ್ಕೆ 34 ಗಸ್ತು ವಾಹನಗಳನ್ನು ನಿಯೋಜಿಸಲಾಗಿದೆ.
ಜಿಲ್ಲೆಯ 51 ಪರೀಕ್ಷಾ ಕೇಂದ್ರದ 590 ಕೊಠಡಿಗಳಲ್ಲಿ ಸಿಸಿ ಕ್ಯಾಮೆರಾ ಅಳಡಿಸಲಾಗಿದ್ದು, ಜಿಲ್ಲಾಧಿಕಾರಿ ಕಚೇರಿಯಲ್ಲಿ ಎಲ್ಲ ಇವುಗಳ ವೆಬ್ ಕಾಸ್ಟಿಂಗ್ ವೀಕ್ಷಣೆಗೆ 12 ಮಂದಿ ಸಿಬ್ಬಂದಿಗಳನ್ನು ನೇಮಿಸಲಾಗಿದೆ. ಜಿಲ್ಲಾ ಮಟ್ಟದ 3 ತಂಡ ಹಾಗೂ ಪ್ರತೀ ತಾಲೂಕಿಗೆ ಒಂದರಂತೆ ವಲಯ ಮಟ್ಟದ ವಿಚಕ್ಷಣ ದಳವನ್ನು ರಚಿಸಲಾಗಿದೆ. ಪರೀಕ್ಷಾರ್ಥಿಗಳು ಪರೀಕ್ಷಾ ಹಾಲ್ ಟಿಕೆಟ್ ತೋರಿಸಿ ಕೆಎಸ್‍ಆರ್‍ಟಿಸಿ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಸರಕಾರ ಅನುವು ಮಾಡಿಕೊಟ್ಟಿದೆ. ಎಲ್ಲಾ ಪರೀಕ್ಷಾ ಕೇಂದ್ರಗಳ ಬಳಿಯೂ ಬಸ್ಸು ನಿಲ್ಲಿಸಲು ಸೂಚಿಸಲಾಗಿದೆ.
0 comments:
Post a Comment