ಬಂಟ್ವಾಳ, ಮಾರ್ಚ್ 21, 2025 (ಕರಾವಳಿ ಟೈಮ್ಸ್) : ಅಟೋ ರಿಕ್ಷಾ ಹಾಗೂ ಸ್ಕೂಟರ್ ನಡುವೆ ಅಪಘಾತ ನಡೆದು ಇಬ್ಬರು ಸವಾರರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಕುಕ್ಕಾಜೆ ಎಂಬಲ್ಲಿ ಬುಧವಾರ ಸಂಜೆ ನಡೆದಿದೆ.
ಗಾಯಾಳುಗಳನ್ನು ಅಟೋ ರಿಕ್ಷಾ ಚಾಲಕ ಮಲ್ಲೂರು ನಿವಾಸಿ ಹೇಮಚಂದ್ರ (36) ಹಾಗೂ ಸ್ಕೂಟರ್ ಸವಾರ ಸ್ಥಳೀಯ ನಿವಾಸಿ ಹೈದರ್ ಎಂದು ಹೆಸರಿಸಲಾಗಿದೆ. ಅಪಘಾತದಿಂದ ಇಬ್ಬರು ಸವಾರರಿಗೂ ಗಾಯಗಳಾಗಿದ್ದು, ಹೇಮಚಂದ್ರ ಅವರು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದರೆ, ಹೈದರ್ ಅವರನ್ನು ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಗೆ ಸಾಗಿಸಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಹೈಲ್ಯಾಂಡ್ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment