ಮಂಗಳೂರು, ಎಪ್ರಿಲ್ 30, 2025 (ಕರಾವಳಿ ಟೈಮ್ಸ್) : ನಗರದ ಹೊರವಲಯದ ಕುಡುಪು ಬಳಿ ಕೇರಳ- ವಯನಾಡು ನಿವಾಸಿ ಅಶ್ರಫ್ ಎಂಬಾತನನ್ನು ಗುಂಪು ಹಲ್ಲೆ ನಡೆಸಿ ಕೊಂದು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರ ಪೆÇಲೀಸರು ಮತ್ತೆ ಐದು ಮಂದಿ ದುಷ್ಕರ್ಮಿಗಳನ್ನು ಬಂಧಿಸಿದ್ದಾರೆ.
ಬಂಧಿತರನ್ನು ಯತಿರಾಜ್, ಸಚಿನ್, ಅನಿಲ್, ಸುಶಾಂತ್ ಮತ್ತು ಆದರ್ಶ್ ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 15 ಮಂದಿಯನ್ನು ಪೆÇಲೀಸರು ಬಂಧಿಸಿದ್ದರು. ಈ ಮೂಲಕ ಬಂಧಿತರ ಇಟ್ಟು ಸಂಖ್ಯೆ 20ಕ್ಕೇರಿದೆ.
ಕುಡುಪು ನಿವಾಸಿಗಳಾದ ಸಚಿನ್ ಟಿ (26), ದೇವದಾಸ್ (50), ಮಂಜುನಾಥ್ (32), ಸಾಯಿದೀಪ್ (29), ನಿತೇಶ್ ಕುಮಾರ್ @ ಸಂತೋಷ್ (33), ದೀಕ್ಷಿತ್ ಕುಮಾರ್ (32), ಸಂದೀಪ್ (23), ವಿವಿಯನ್ ಆಳ್ವಾರೀಸ್ (41), ಶ್ರೀದತ್ತ (32), ರಾಹುಲ್ (23), ಪ್ರದೀಪ್ ಕುಮಾರ್ (35), ಮನೀಷ್ ಶೆಟ್ಟಿ (21), ಧನುಷ್ (31), ದೀಕ್ಷಿತ್ (27), ಕಿಶೋರ್ ಕುಮಾರ್ (37) ಅವರನ್ನು ಈಗಾಗಲೇ ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.
ಎಪ್ರಿಲ್ 27 ರ ಭಾನುವಾರ ಸಂಜೆ ಸುಮಾರು 5.30 ರ ವೇಳೆಗೆ ಮಂಗಳೂರು ನಗರದ ಹೊರವಲಯದ ಕುಡುಪು ಭಟ್ರ ಕಲ್ಲುರ್ಟಿ ದೈವಸ್ಥಾನದ ಸಮೀಪದಲ್ಲಿ ಅಪರಿಚಿತ ವ್ಯಕ್ತಿಯ ಮೇಲೆ ಗುಂಪೊಂದು ದಾಳಿ ನಡೆಸಿ ಹಲ್ಲೆ ನಡೆಸಿ ಕೊಂದು ಹಾಕಿ ಪರಾರಿಯಾಗಿದ್ದರು. ಕೃತ್ಯದಲ್ಲಿ ಸುಮಾರು 25ಕ್ಕೂ ಹೆಚ್ಚು ವ್ಯಕ್ತಿಗಳು ಭಾಗವಹಿಸಿರುವ ಸಂಶಯವಿದ್ದು, ಈ ಬಗ್ಗೆ ಪೊಲೀಸರು ಇನ್ನೂ ಕಾರ್ಯಾಚರಣೆ ಮುಂದುವರೆಸಿದ್ದಾರೆ.
0 comments:
Post a Comment