ಬಂಟ್ವಾಳ, ಎಪ್ರಿಲ್ 30, 2025 (ಕರಾವಳಿ ಟೈಮ್ಸ್) : ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದ ಬಸವಣ್ಣನವರು ಅಸಮಾನತೆಯನ್ನು ಹೋಗಲಾಡಿಸಲು ಹೋರಾಡಿದ ರೀತಿ ಅದ್ಭುತವಾದದ್ದು. ತಾರತಮ್ಯಗಳನ್ನು ನಿವಾರಿಸಿ ಸಾಮಾಜಿಕ ಸಮಾನತೆಯ ಉದಾತ್ತ ಚಿಂತನೆಗಳನ್ನು ಸಾಕಾರಗೊಳಿಸಲು 12ನೇ ಶತಮಾನದಲ್ಲಿಯೇ ಪಣತೊಟ್ಟ ಮಹಾನುಭಾವ ಬಸವಣ್ಣ ಎಂದು ಬಂಟ್ವಾಳ ತಾಲೂಕು ಕಚೇರಿ ಕೇಂದ್ರ ಸ್ಥಾನೀಯ ಉಪತಹಶೀಲ್ದಾರ್ ನರೇಂದ್ರನಾಥ ಮಿತ್ತೂರು ಕೊಂಡಾಡಿದರು.
ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಬಿ ಸಿ ರೋಡಿನ ಮಿನಿ ವಿಧಾನಸೌಧ ಸಭಾಂಗಣದಲ್ಲಿ ಬುಧವಾರ ನಡೆದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ತಾಲೂಕು ಚುನಾವಣಾ ಶಾಖೆ ಉಪತಹಶೀಲ್ದಾರ್ ನವೀನ್ ಕುಮಾರ್ ಬೆಂಜನಪದವು ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭ ಕಂದಾಯ ನಿರೀಕ್ಷಕರಾದ ವಿಜಯ್ ಆರ್, ಜನಾರ್ದನ್ ಜೆ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಶುಕುಮಾರ್, ತಾಲೂಕು ಕಚೇರಿ ಸಿಬ್ಬಂದಿಗಳು, ಗ್ರಾಮ ಆಡಳಿತ ಅಧಿಕಾರಿಗಳು, ಗ್ರಾಮ ಸಹಾಯಕರು ಭಾಗವಹಿಸಿದ್ದರು.
0 comments:
Post a Comment