ಬೆಂಗಳೂರು, ಎಪ್ರಿಲ್ 30, 2025 (ಕರಾವಳಿ ಟೈಮ್ಸ್) : ರಾಜ್ಯ ಪೆÇಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರ ಸೇವಾವಧಿಯನ್ನು ಮೇ 21ರವರೆಗೆ ವಿಸ್ತರಿಸಿ ರಾಜ್ಯ ಸರಕಾರ ಮಂಗಳವಾರ ಆದೇಶ ಹೊರಡಿಸಿದೆ.
ಎಪ್ರಿಲ್ 30 ರಂದು ನಿವೃತ್ತಿ ಹೊಂದಬೇಕಿದ್ದ ಅಲೋಕ್ ಮೋಹನ್ ಅವರ ಸೇವಾವಧಿಯನ್ನು ಮೇ 21ರ ವರೆಗೆ ವಿಸ್ತರಣೆ ಮಾಡಲಾಗಿದೆ. ಈ ಮೂಲಕ ಪೆÇಲೀಸ್ ಇಲಾಖೆಗೆ ನೂತನ ಸಾರಥಿಯ ಆಯ್ಕೆಗೆ ಕೊಂಚ ಬ್ರೇಕ್ ಬಿದ್ದಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಮಂಗಳವಾರ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸಭೆಯಲ್ಲಿ ಗೃಹ ಸಚಿವ ಡಾ ಜಿ ಪರಮೇಶ್ವರ ಹಾಗೂ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜ£ೀಶ್ ಅವರು ಭಾಗವಹಿಸಿದ್ದರು.
ರಾಜ್ಯ ಸರ್ಕಾರ ಹೊಸ ಡಿಜಿಪಿ ನೇಮಕ ಪ್ರಕ್ರಿಯೆಯನ್ನೂ ಆರಂಭಿಸಿದ್ದು, ನಿಯಮದಂತೆ ನಾಲ್ಕು ಹಿರಿಯ ಐಪಿಎಸ್ ಅಧಿಕಾರಿಗಳ ಹೆಸರುಗಳನ್ನು ಕೇಂದ್ರಕ್ಕೆ ಶಿಫಾರಸು ಮಾಡಿದೆ. ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಡಿಜಿಯಾಗಿರುವ ಪ್ರಶಾಂತ್ ಕುಮಾರ್ ಠಾಕೂರ್, ಸಿಐಡಿ ಡಿಜಿಯಾಗಿರುವ ಡಾ. ಎಂ.ಎ. ಸಲೀಂ, ಪೆÇಲೀಸ್ ಗೃಹ ನಿರ್ಮಾಣ ವಿಭಾಗದ ಡಿಜಿಯಾಗಿರುವ ರಾಮಚಂದ್ರ ರಾವ್, ಸಿಐಡಿ ಸೈಬರ್ ವಿಭಾಗದ ಡಿಜಿಪಿ ಪ್ರಣಬ್ ಮೊಹಂತಿ ಅವರ ಹೆಸರುಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಆಯ್ಕೆ ಸಮಿತಿ ಕೇಂದ್ರಕ್ಕೆ ಶಿಫಾರಸು ಮಾಡಿದೆ.
0 comments:
Post a Comment