ಮಂಗಳೂರು, ಎಪ್ರಿಲ್ 30, 2025 (ಕರಾವಳಿ ಟೈಮ್ಸ್) : ಮಂಗಳೂರಿನ ಹೊರವಲಯದ ಕುಡುಪು ಬಳಿ ಕೇರಳ- ವಯನಾಡು ನಿವಾಸಿ ಅಶ್ರಫ್ ಎಂಬಾತನನ್ನು ಗುಂಪು ಹಲ್ಲೆ ನಡೆಸಿ ಕೊಂದು ಹಾಕಿದ ಪ್ರಕರಣ ತೀವ್ರ ಖಂಡನೀಯವಾಗಿದ್ದು, ಈ ಬಗ್ಗೆ ಪೊಲೀಸ್ ಇಲಾಖೆ ಸಮಗ್ರ ತನಿಖೆ ಕೈಗೊಂಡು ತಪ್ಪಿತಸ್ಥರು ಎಷ್ಟೇ ಪ್ರಭಾವಿಯಾಗಿದ್ದರೂ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಸಂಘಟಿತ ಘಟಕದ ಜಿಲ್ಲಾಧ್ಯಕ್ಷ ಬಿ ಎಂ ಅಬ್ಬಾಸ್ ಅಲಿ ಆಗ್ರಹಿಸಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಅವರು, ಘಟನೆಯ ಬಗ್ಗೆ ಸಮಾಜದಲ್ಲಿ ಒಂದು ರೀತಿಯ ಆತಂಕ, ಭಯ, ಗೊಂದಲಗಳು ಉಂಟಾಗಿದ್ದು, ಪೊಲೀಸ್ ಇಲಾಖೆ ಹಾಗೂ ರಾಜ್ಯ ಸರಕಾರ ಈ ಬಗ್ಗೆ ಸೂಕ್ತ ತನಿಖೆ ಕೈಗೊಂಡು ತಪ್ಪಿತಸ್ಥರು ಯಾವುದೇ ಕಾರಣಕ್ಕೂ ಕಾನೂನಿನ ಕುಣಿಕೆಯಿಂದ ತಪ್ಪಿಸಿಕೊಳ್ಳದಂತೆ ನಿಗಾ ವಹಿಸುವಂತೆ ಅಬ್ಬಾಸ್ ಅಲಿ ಒತ್ತಾಯಿಸಿದ್ದಾರೆ.
0 comments:
Post a Comment