ಕುಡುಪು ಬಳಿ ವಲಸೆ ಕಾರ್ಮಿಕನ ಗುಂಪು ಹತ್ಯೆ ಕೇಸ್ : 15 ಮಂದಿ ಪೊಲೀಸ್ ವಶಕ್ಕೆ - Karavali Times ಕುಡುಪು ಬಳಿ ವಲಸೆ ಕಾರ್ಮಿಕನ ಗುಂಪು ಹತ್ಯೆ ಕೇಸ್ : 15 ಮಂದಿ ಪೊಲೀಸ್ ವಶಕ್ಕೆ - Karavali Times

728x90

29 April 2025

ಕುಡುಪು ಬಳಿ ವಲಸೆ ಕಾರ್ಮಿಕನ ಗುಂಪು ಹತ್ಯೆ ಕೇಸ್ : 15 ಮಂದಿ ಪೊಲೀಸ್ ವಶಕ್ಕೆ

ಮಂಗಳೂರು, ಎಪ್ರಿಲ್ 29, 2025 (ಕರಾವಳಿ ಟೈಮ್ಸ್) : ನಗರದ ಹೊರವಲಯದ ಕುಡುಪು ಸಮೀಪ ಭಾನುವಾರ ಸಂಜೆ ಸಂಶಯಾಸ್ಪದ ರೀತಿಯಲ್ಲಿ ಅಪರಿಚಿತ ಯುವಕನ ಮೃತದೇಹ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಮಾಹಿತಿ ಕಲೆ ಹಾಕಿರುವ ಪೊಲೀಸರು ಇದೊಂದು ಕೊಲೆ ಪ್ರಕರಣ ಎಂದು ಕಂಡುಬಂದ ಹಿನ್ನಲೆಯಲ್ಲಿ ಕಾರ್ಯಾಚರಣೆ ನಡೆಸಿ ಈ ಸಂಬಂಧ ಸುಮಾರು 15 ಮಂದಿ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿದ್ದಾರೆ. 

ಈ ಬಗ್ಗೆ ಮಾಧ್ಯಮಗಳಿಗೆ ಮಂಗಳವಾರ ಮಾಹಿತಿ ನೀಡಿದ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್, ಕುಡುಪು ನಿವಾಸಿಗಳಾದ ಸಚಿನ್ ಟಿ (26), ದೇವದಾಸ್ (50), ಮಂಜುನಾಥ್ (32), ಸಾಯಿದೀಪ್ (29), ನಿತೇಶ್ ಕುಮಾರ್ @ ಸಂತೋಷ್ (33), ದೀಕ್ಷಿತ್ ಕುಮಾರ್ (32), ಸಂದೀಪ್ (23), ವಿವಿಯನ್ ಆಳ್ವಾರೀಸ್ (41), ಶ್ರೀದತ್ತ (32), ರಾಹುಲ್ (23), ಪ್ರದೀಪ್ ಕುಮಾರ್ (35), ಮನೀಷ್ ಶೆಟ್ಟಿ (21), ಧನುಷ್ (31), ದೀಕ್ಷಿತ್ (27), ಕಿಶೋರ್ ಕುಮಾರ್ (37) ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದ್ದು, ತನಿಖೆಯ ಮುಂದುವರಿದ ವಿಚಾರವನ್ನು ಮುಂದಕ್ಕೆ ತಿಳಿಸಲಾಗುವುದು ಎಂದಿದ್ದಾರೆ. 

ಎಪ್ರಿಲ್ 27 ರ ಭಾನುವಾರ ಸಂಜೆ ಸುಮಾರು 5.30 ರ ವೇಳೆಗೆ ಮಂಗಳೂರು ನಗರದ ಹೊರವಲಯದ ಕುಡುಪು ಭಟ್ರ ಕಲ್ಲುರ್ಟಿ ದೈವಸ್ಥಾನದ ಸಮೀಪದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾದ ಬಗ್ಗೆ ಗ್ರಾಮಾಂತರ ಪೆÇಲೀಸ್ ಠಾಣೆಗೆ ಮಾಹಿತಿ ಲಭಿಸಿತ್ತು. ಸ್ಥಳೀಯ ಪೆÇಲೀಸರು ಮತ್ತು ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬಳಿಕ ಅಪರಾಧ ಸ್ಥಳ ಪರಿಶೀಲನಾ ತಜ್ಞರು ಹಾಗೂ ಮೊಬೈಲ್ ಪೆÇರೆನ್ಸಿಕ್ ತಂಡಗಳನ್ನು ಸ್ಥಳಕ್ಕೆ ಕರೆಯಲಾಯಿತು. ಸ್ಥಳ ಪರಿಶೀಲನೆ ವೇಳೆ ಮೃತದೇಹದ ಮೈಮೇಲೆ ಸ್ಪಷ್ಟವಾದ ಹಾಗೂ ಗಂಭೀರ ಗಾಯಗಳು ಕಂಡುಬಾರದ ಕಾರಣ, ಅಪರಾಧ ಸ್ಥಳ ಪರಿಶೀಲನಾ ತಜ್ಞರು ಮತ್ತು ಪೆÇರೆನ್ಸಿಕ್ ತಂಡಗಳು ಶವ ಪರೀಕ್ಷೆ (ಪೆÇೀಸ್ಟ್ ಮಾರ್ಟಂ) ನಡೆಸುವಂತೆ ಶಿಫಾರಸ್ಸು ಮಾಡಿದ್ದಾರೆ.

ಅದರಂತೆ, ಪ್ರಾಥಮಿಕವಾಗಿ, ಅಪರಿಚಿತ ಮೃತದೇಹ ಕಂಡುಬಂದ ಬಗ್ಗೆ ಸ್ವೀಕೃತ ದೂರಿನಂತೆ ಮಂಗಳೂರು ಗ್ರಾಮಾಂತರ ಪೆÇಲೀಸ್ ಠಾಣೆಯಲ್ಲಿ ಅನುಮಾನಾಸ್ಪದ ಅಸ್ವಾಭಾವಿಕ ಸಾವು ಪ್ರಕರಣವನ್ನು (ಯುಡಿಆರ್) ದಾಖಲಿಸಲಾಗಿತ್ತು. ಹಾಗೂ ಮೃತದೇಹವನ್ನು ಮರಣೋತ್ತರ ವೈದ್ಯಕೀಯ ಪರೀಕ್ಷೆಗೆ ಒಳಪಡಿಸುವ ಸಲುವಾಗಿ ಮಂಗಳೂರು ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಯಿತು.

ಬಳಿಕ ಮೃತನ ಗುರುತು ಪತ್ತೆ ಹಚ್ಚುವ ಸಲುವಾಗಿ, ಮೃತನ ಫೆÇೀಟೋಗಳನ್ನು ಹಂಚಲಾಗಿತ್ತು. ಘಟನೆಯ ಸಮಯದಲ್ಲಿ ಸ್ಥಳದಲ್ಲಿದ್ದ ಸಾಕ್ಷಿದಾರರು ಮತ್ತು ಅನುಮಾ£ತ ವ್ಯಕ್ತಿಗಳನ್ನು ವಿಚಾರಣೆ ಮಾಡುವ ಮತ್ತು ಸ್ಥಳದ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಗಳು ಹಾಗೂ ಮೊಬೈಲ್/ ಟವರ್ ಡಂಪ್ ಡೇಟಾ ಸಂಗ್ರಹಿಸಿ ವಿಶ್ಲೇಷಿಸಲು ಹಲವು ತಂಡಗಳನ್ನು ರಚಿಸಲಾಯಿತು.

ತನಿಖೆಯಲ್ಲಿ ಲಭ್ಯವಾದ ಮಾಹಿತಿ ಹಾಗೂ ಸ್ಥಳೀಯ ವ್ಯಕ್ತಿಗಳ ಭಾಗವಹಿಸುವಿಕೆಯ ಬಗ್ಗೆ ಹೆಚ್ಚುತ್ತಿರುವ ಅನುಮಾನಗಳ ಆಧಾರದಲ್ಲಿ, ಅಪರಿಚಿತ ಮೃತದೇಹದ ಶವ ಪರೀಕ್ಷೆ ನಡೆಸಲಾಯಿತು. ಮರಣೋತ್ತರ ವೈದ್ಯಕೀಯ ಪರೀಕ್ಷೆ ನಡೆಸಿದ ವೈದ್ಯರು ನೀಡಿದ ಪ್ರಾಥಮಿಕ ವರದಿ ಪ್ರಕಾರ, ಮೃತನ ಬೆನ್ನು ಭಾಗದಲ್ಲಿ ಬಹಳಷ್ಟು ಬಲವಾದ ಹೊಡೆತದ ಗಾಯಗಳ ಕಾರಣದಿಂದ ಉಂಟಾದ ರಕ್ತಸ್ರಾವ, ಶಾಕ್ ಮತ್ತು ಸೂಕ್ತ ಸಮಯದಲ್ಲಿ ಸರಿಯಾದ ಚಿಕಿತ್ಸೆ ಸಿಗದಿರುವುದರಿಂದ ಆತ ಸಾವನ್ನಪ್ಪಿರುವುದು ಕಂಡುಬಂದಿರುತ್ತದೆ ಎಂದು ವರದಿ ನೀಡಲಾಗಿತ್ತು.

ಪೊಲೀಸ್ ತನಿಖೆಯಲ್ಲಿ ತಿಳಿದುಬಂದಂತೆ, ಭಾನುವಾರ ಮಧ್ಯಾಹ್ನ ಸುಮಾರು 3 ಗಂಟೆಗೆ ಭಟ್ರ ಕಲ್ಲುರ್ಟಿ ದೈವಸ್ಥಾನದ ಬಳಿ ಮೈದಾನದಲ್ಲಿ ನಡೆಯುತ್ತಿದ್ದ ಕ್ರಿಕೆಟ್ ಪಂದ್ಯಾವಳಿಯ ಸಮಯದಲ್ಲಿ, ಸದ್ರಿ ಅಪರಿಚಿತ ವ್ಯಕ್ತಿಗೆ ಕೆಲವರು ಗುಂಪು ಸೇರಿ ಕೈಯಿಂದ ಮತ್ತು ಕಟ್ಟಿಗೆಯಿಂದ ಹೊಡೆದು, ಕಾಲಿನಿಂದ ಯದ್ವಾತದ್ವ ತುಳಿದು ಹಲ್ಲೆ ನಡೆಸಿದ್ದು, ಈ ಸಮಯ ಕೆಲವರು ತಡೆಯಲು ಯತ್ನಿಸಿದರೂ, ಆತನ ಮೇಲೆ ನಿರಂತರ ಹಲ್ಲೆ ನಡೆಸಿದ ಕಾರಣ ಅಪರಿಚಿತ ವ್ಯಕ್ತಿಯು ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಕೃತ್ಯದಲ್ಲಿ ಸುಮಾರು 25ಕ್ಕೂ ಹೆಚ್ಚು ವ್ಯಕ್ತಿಗಳು ಭಾಗವಹಿಸಿರುವ ಸಂಶಯವಿದ್ದು, ಈಗಾಗಲೇ 15 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಮತ್ತು ಪ್ರಾಥಮಿಕ ವರದಿಯಲ್ಲಿ ಉಲ್ಲೇಖಿಸಲಾದ ಮತ್ತು ಕೃತ್ಯದಲ್ಲಿ ಬಾಗಿಯಾದ ಉಳಿದ ಆರೋಪಿಗಳನ್ನು ಶೀಘ್ರದಲ್ಲಿ ಪತ್ತೆಮಾಡಿ ಬಂಧಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಕಮಿಷನರ್ ತಿಳಿಸಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಕುಡುಪು ಬಳಿ ವಲಸೆ ಕಾರ್ಮಿಕನ ಗುಂಪು ಹತ್ಯೆ ಕೇಸ್ : 15 ಮಂದಿ ಪೊಲೀಸ್ ವಶಕ್ಕೆ Rating: 5 Reviewed By: karavali Times
Scroll to Top